×
Ad

ಶಕ್ತಿ ರೆಸಿಡೆನ್ಶಿಯಲ್ ಶಾಲೆ: ವಿದ್ಯಾರ್ಥಿ ಸಂಘದ ಉದ್ಘಾಟನೆ

Update: 2025-06-28 20:58 IST

ಮಂಗಳೂರು ಜೂ.28:ಮಂಗಳೂರಿನ ಶಕ್ತಿನಗರದಲ್ಲಿರುವ ಶಕ್ತಿ ವಸತಿ ಶಾಲೆಯಲ್ಲಿ 2025-26 ನೇ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ಸಂಘದ ಪದಗ್ರಹಣ ಮತ್ತು ಉದ್ಘಾಟನಾ ಸಮಾರಂಭವು ಸೋಮವಾರ ರೇಷ್ಮಾ ಮೆಮೋರಿಯಲ್ ಸಭಾಂಗಣದಲ್ಲಿ ನೆರವೇರಿತು.

ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ಗೋವಾ ಸರಕಾರದ ಉನ್ನತ ಶಿಕ್ಷಣ ಪರಿಷತ್ ಉಪಾಧ್ಯಕ್ಷರು, ಹಾಗೂ ನಿಟ್ಟೆ ವಿಶ್ವವಿದ್ಯಾಲಯ ತಾಂತ್ರಿಕ ಶಿಕ್ಷಣ ವಿಭಾಗದ ಉಪಾಧ್ಯಕ್ಷ ಪ್ರೊ. ಡಾ. ಗೋಪಾಲ್ ಮೊಗೆರಾಯ ದೀಪವನ್ನು ಪ್ರಜ್ವಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ವಿದ್ಯಾರ್ಥಿ ಸಂಘದ ನೂತನ ಪದಾಧಿಕಾರಿಗಳಿಗೆ ಮತ್ತು ವಿವಿಧ ವಿಭಾಗಗಳಾದ ಅಗ್ನಿ, ವಾಯು, ಜಲ, ಪೃಥ್ವಿ ನಾಮಾಂಕಿತ ದಳಗಳ ಧ್ವಜವನ್ನು ವಿತರಿಸುವ ಮೂಲಕ ನಾಯಕರ ಪದಗ್ರಹಣವು ನಡೆಯಿತು.

ವಿದ್ಯಾರ್ಥಿ ಸಂಘದ ನಾಯಕ ತಮೀಮ್ ರೂಮಿ, ನಾಯಕಿ ಸಾನ್ವಿ ಕಿಶೋರ್ ಮತ್ತು ಪದಾಧಿಕಾರಿಗಳು ಪ್ರಮಾಣವಚನ ಸ್ವೀಕರಿಸಿದರು. ಶಕ್ತಿ ಶಾಲೆಯ ಪ್ರಾಂಶುಪಾಲ ಬಬಿತಾ ಸೂರಜ್ ಪ್ರಮಾಣವಚನ ಬೋಧಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಶಕ್ತಿ ವಿದ್ಯಾ ಸಂಸ್ಥೆಯ ಆಡಳಿತ ಅಧಿಕಾರಿ ಡಾ. ಕೆ .ಸಿ.ನಾಕ್ ಅವರು ನೂತನವಾಗಿ ನೇಮಕಗೊಂಡಿರುವ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳಿಗೆ ಶುಭ ಹಾರೈಸಿದರು.

ಶಕ್ತಿ ವಿದ್ಯಾ ಸಂಸ್ಥೆಯ ಮುಖ್ಯ ಸಲಹೆಗಾರ ರಮೇಶ್ ಕೆ, ಶಕ್ತಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ವೆಂಕಟೇಶ್ ಮೂರ್ತಿ ವೇದಿಕೆಯಲ್ಲಿ ಉಪಸ್ಥಿತಿದ್ದರು. ಆನೆಟ್ ಕಾರ್ಯಕ್ರಮವನ್ನು ನಿರೂಪಿಸಿದರು. ಸ್ಮಿಶಾ ಸ್ವಾಗತಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News