×
Ad

ಉಪ್ಪಿನಂಗಡಿ: ವಿದ್ಯುತ್ ಆಘಾತಕ್ಕೆ ವ್ಯಕ್ತಿ ಬಲಿ

Update: 2025-06-28 21:06 IST

ಉಪ್ಪಿನಂಗಡಿ: ಅಡಕೆ ಕೃಷಿಗೆ ಔಷಧಿ ಸಿಂಪಡಿಸುವ ವೇಳೆ ವಿದ್ಯುತ್ ಸ್ಪರ್ಶಗೊಂಡು ಕೃಷಿಕ ಮೃತಪಟ್ಟ ಘಟನೆ ಶನಿವಾರ ರೆಖ್ಯಾ ಗ್ರಾಮದ ಪರ್ಕಳ ಎಂಬಲ್ಲಿ ನಡೆದಿದೆ.

ಅರಸಿನಮಕ್ಕಿ ಗ್ರಾಮದ ಉಡ್ಯೆರೆ ಮನೆ ನಿವಾಸಿ ಕೃಷ್ಣಪ್ಪ ಕುಲಾಲ್ (49) ಮೃತ ವ್ಯಕ್ತಿಯಾಗಿದ್ದು, ಇವರು ಪರ್ಕಳದ ತೋಟದಲ್ಲಿ ಅಡಕೆ ಕೃಷಿಗೆ ಔಷಧಿ ಸಿಂಪಡಿಸುವಾಗ ಬಳಸಿದ ದೋಟಿಯು ವಿದ್ಯುತ್ ತಂತಿಯನ್ನು ಸ್ಪರ್ಶಿಸಿ ವಿದ್ಯುತ್ ಆಘಾತಕ್ಕೆ ಸಿಲುಕಿದರು. ತಕ್ಷಣವೇ ಅವರನ್ನು ನೆಲ್ಯಾಡಿಯ ಖಾಸಗಿ ಆಸ್ಪತ್ರೆಗೆ ಕರೆತರಲಾಯಿತ್ತಾದರೂ, ಅವರಾಗಲೇ ಮೃತಪಟ್ಟಿದ್ದಾರೆಂದು ವೈದ್ಯರು ತಿಳಿಸಿದರು.

ಮೃತ ಕೃಷ್ಣಪ್ಪ ಕುಲಾಲ್ ಅರಸಿನಮಕ್ಕಿ ಕುಲಾಲರ ಸಮಾಜಸೇವಾ ಸಂಘದ ಮಾಜಿ ಅಧ್ಯಕ್ಷರಾಗಿಯೂ, ಪ್ರಸಕ್ತ ಕಾರ್ಯದರ್ಶಿಯಾಗಿಯೂ ಸೇವೆ ಸಲ್ಲಿಸುತ್ತಿದ್ದರು. ಮೃತರು ಪತ್ನಿ, ಒರ್ವ ಪುತ್ರ, ಒರ್ವ ಪುತ್ರಿಯನ್ನು ಅಗಲಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News