ಮಂಗಳೂರು: ಬಾಲಕಿಯ ಅತ್ಯಾಚಾರಕ್ಕೆ ಯತ್ನ ಪ್ರಕರಣ; ಆರೋಪಿ ಸೆರೆ
Update: 2025-06-28 22:31 IST
ಉಳ್ಳಾಲ: Instagram ನಲ್ಲಿ ಪರಿಚಯವಾದ ಬಾಲಕಿಯನ್ನು ಸೋಮೇಶ್ವರ ಬೀಚ್ ಬಳಿ ಕರೆದುಕೊಂಡು ಬಂದ ಯುವಕನೋರ್ವ ಕಾರಿನಲ್ಲೇ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ ಎನ್ನಲಾದ ಘಟನೆ ನಡೆದಿದ್ದು, ಈ ಬಗ್ಗೆ ಬಾಲಕಿ ನೀಡಿದ ದೂರಿನನ್ವಯ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ಅಡ್ಯಾರ್ ವಳಚ್ಚಿಲ್ ನಿವಾಸಿ ಕೆಲ್ವಿನ್ (24) ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿ ಕೆಲ್ವಿನ್ ತಲಪಾಡಿ ನಿವಾಸಿ ಬಾಲಕಿಯನ್ನು Instagramನಲ್ಲಿ ಪರಿಚಯ ಮಾಡಿಕೊಂಡಿದ್ದ. ನಂತರ ಆಕೆಯನ್ನು ಪ್ರೀತಿಸುವುದಾಗಿ ನಂಬಿಸಿ, ಫೋನ್ ಕರೆ ಮೂಲಕ ಸಂಪರ್ಕಿಸಿ ಕಳೆದ ಗುರುವಾರ ಕೆಲ್ವಿನ್ ಆಕೆಯನ್ನು ಆಕೆಯ ಮನೆ ಬಳಿಯೇ ಭೇಟಿ ಮಾಡಿ ನಂತರ ತನ್ನ ಕಾರಲ್ಲಿ ಸೋಮೇಶ್ವರ ಬೀಚ್‍ಗೆ ಕರೆದೊಯ್ದಿದ್ದ. ಈ ವೇಳೆ ನಾನು ವಿರೋಧ ವ್ಯಕ್ತಪಡಿಸಿದರೂ ಆರೋಪಿ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ ಎಂದು ಬಾಲಕಿ ಪೊಲೀಸರಿಗೆ ದೂರು ನೀಡಿದ್ದಾಳೆ.
ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.