×
Ad

ಕರ್ಣಾಟಕ ಬ್ಯಾಂಕ್ ಸಿಇಒ ಶ್ರೀಕೃಷ್ಣನ್ ಹರಿಹರ ಶರ್ಮಾರ ರಾಜೀನಾಮೆ ಅಂಗೀಕಾರ

Update: 2025-06-29 22:54 IST

ಮಂಗಳೂರು: ಕರ್ಣಾಟಕ ಬ್ಯಾಂಕಿನ ವ್ಯವಸ್ಥಾಪಕ ನಿರ್ದೇಶಕ, ಸಿಇಒ ಶ್ರೀಕೃಷ್ಣನ್ ಹರಿಹರ ಶರ್ಮಾ ಅವರ ರಾಜೀನಾಮೆಯನ್ನು ಬ್ಯಾಂಕಿನ ಆಡಳಿತ ಮಂಡಳಿ ರವಿವಾರ ಅಂಗೀಕರಿಸಿದೆ.

ಈ ರಾಜೀನಾಮೆ 2025ರ ಜುಲೈ 15ರಿಂದ ಅನ್ವಯವಾಗಲಿದೆ. ಶರ್ಮಾ ಅವರು ಮುಂಬೈಗೆ ಮರಳುವುದೂ ಸೇರಿದಂತೆ ವೈಯಕ್ತಿಕ ಕಾರಣಗಳಿಂದ ರಾಜೀನಾಮೆ ನೀಡಿದ್ದಾರೆ ಎಂದು ಬ್ಯಾಂಕಿನ ಪ್ರಕಟಣೆ ಹೇಳಿದೆ.

ಬ್ಯಾಂಕಿನ ಕಾರ್ಯನಿರ್ವಾಹಕ ನಿರ್ದೇಶಕ ಶೇಖರ್ ರಾವ್ ಅವರು ಕೂಡಾ ಮಂಗಳೂರಿಗೆ ಸ್ಥಳಾಂತರಗೊಳ್ಳಲು ಅಸಾಧ್ಯ ಎಂಬ ಕಾರಣ ನೀಡಿ ಮತ್ತು ಇತರ ವೈಯಕ್ತಿಕ ಸಮಸ್ಯೆಗಳ ಕಾರಣ ನೀಡಿ ರಾಜೀನಾಮೆ ಸಲ್ಲಿಸಿದ್ದಾರೆ. ಇವರ ರಾಜೀನಾಮೆಯನ್ನೂ ಬ್ಯಾಂಕ್ ಆಡಳಿತ ಮಂಡಳಿ ಅಂಗೀಕರಿಸಿದ್ದು, ಇದು ಜುಲೈ 31ರಿಂದ ಅನ್ವಯವಾಗಲಿದೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News