×
Ad

ಮಂಗಳೂರು| ಅಶ್ರಫ್ ಗುಂಪು ಹತ್ಯೆ ಪ್ರಕರಣ: ಮೂವರು ಆರೋಪಿಗಳ ಜಾಮೀನು ಅರ್ಜಿ ತಿರಸ್ಕೃತ

Update: 2025-06-30 20:14 IST

ಮುಹಮ್ಮದ್ ಅಶ್ರಫ್

ಮಂಗಳೂರು, ಜೂ. 30: ನಗರದ ಹೊರವಲಯದ ಕುಡುಪುವಿನಲ್ಲಿ ಎ.27ರಂದು ನಡೆದ ವಯನಾಡಿನ ಯುವಕ ಮುಹಮ್ಮದ್ ಅಶ್ರಫ್ ಅವರ ಗುಂಪು ಹತ್ಯೆ ಪ್ರಕರಣದ ಮೂವರು ಆರೋಪಿಗಳು ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ಸೋಮವಾರ ನ್ಯಾಯಾಲಯದಲ್ಲಿ ತಿರಸ್ಕೃತಗೊಂಡಿದೆ.

ಪ್ರಕರಣದ 1ನೇ ಆರೋಪಿ ಸಚಿನ್ ಟಿ, 3ನೇ ಆರೋಪಿ ಮಂಜುನಾಥ್ ಮತ್ತು 4ನೇ ಆರೋಪಿ ನಟೇಶ್ ಎಂಬವರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಮಂಗಳೂರಿನ ಎರಡನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ತಿರಸ್ಕರಿಸಿದೆ ಎಂದು ತಿಳಿದು ಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News