ದ.ಕ. ಕಾರ್ಯನಿರತ ಪತ್ರಕರ್ತರ ಸಂಫದ ಸುವರ್ಣ ಸಂಭ್ರಮ ಕಾರ್ಯಕ್ರಮಕ್ಕೆ ಸಿಎಂಗೆ ಅಹ್ವಾನ
ಮಂಗಳೂರು , ಜು.1: ಮಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸುವರ್ಣ ಸಂಭ್ರಮ ಕೈಪಿಡಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಬೆಂಗಳೂರು ವಾರ್ತಾ ಭವನದಲ್ಲಿ ಬಿಡುಗಡೆಗೊಳಿಸಿದರು.
ಇದೇ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಸುವರ್ಣ ಸಂಭ್ರಮ ಕಾರ್ಯಕ್ರಮ ಉದ್ಘಾಟನೆಗೆ ಆಹ್ವಾನಿಸಲಾಯಿತು.
ಈ ವೇಳೆ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ ವಿ ಪ್ರಭಾಕರ್, ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷೆ ಆಯೇಷಾ ಖಾನಮ್,ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗ ಡೂರು, ಪ್ರಧಾನ ಕಾರ್ಯದರ್ಶಿ ಲೋಕೇಶ ಜಿ.ಸಿ., ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ, ಉಪಾಧ್ಯಕ್ಷ ಭಾಸ್ಕರ್ ರೈ ಕಟ್ಟ, ಕೋಶಾಧಿಕಾರಿ ಪುಷ್ಪರಾಜ್ ಬಿ ಎನ್, ಕಾರ್ಯಕಾರಿ ಸಮಿತಿ ಸದಸ್ಯ ರಾಜೇಶ್ ದಡ್ಡಂಗಡಿ, ಕೆಯುಡಬ್ಲ್ಯುಜೆ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಸೋಮಶೇಖರ್ ಗಾಂಧಿ ಉಪಸ್ಥಿತರಿದ್ದರು.