×
Ad

ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಯಿಂದ ಗುರುವಂದನೆ

Update: 2025-07-01 19:39 IST

ಮಂಗಳೂರು: ಪೇಜಾವರ ವಿಶ್ವೇಶ ತೀರ್ಥ ಸ್ವಾಮೀಜಿಗೆ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಅವರಿಂದ ಗುರುವಂದನೆ, ವೃಕ್ಷ ಬೀಜ, ಸಸಿ ತುಲಾಭಾರ ಕಾರ್ಯಕ್ರಮವು ಮಂಗಳವಾರ ಕಲ್ಕೂರ ಪ್ರತಿಷ್ಠಾನ ವತಿಯಿಂದ ನಗರದ ಕದ್ರಿಕಂಬಳ ಮಂಜುಪ್ರಾಸಾದಲ್ಲಿ ನಡೆಯಿತು.

ಈ ಸಂದರ್ಭ ಮಾತನಾಡಿದ ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ತಾಪಮಾನ ಹೆಚ್ಚಾಗುತ್ತಿರುವ ಇಂದಿನ ದಿನಗಳಲ್ಲಿ ಎಲ್ಲರೂ ಗಿಡಗಳನ್ನು ನೆಟ್ಟು ಪೋಷಿಸಬೇಕು. ವಾಹನಗಳನ್ನು ಹೊಂದಿರುವವರು ಪರಿಸರ ಮಾಲಿನ್ಯಕ್ಕೆ ಕಾರಣರಾಗುತ್ತಿದ್ದಾರೆ. ಹೀಗಾಗಿ ದ್ವಿಚಕ್ರ ವಾಹನ ಹೊಂದಿರುವ ಎಲ್ಲರೂ ಒಂದು ಗಿಡ, ನಾಲ್ಕು ಚಕ್ರದ ವಾಹನ ಹೊಂದಿರುವ ಎಲ್ಲರೂ ಎರಡು ಗಿಡಗಳನ್ನು ನೆಟ್ಟು ಪೋಷಿಸಬೇಕು. ಮನೆ, ಕಚೇರಿಗಳಲ್ಲಿ ಹವಾನಿಯಂತ್ರಣ ವ್ಯವಸ್ಥೆ (ಎಸಿ) ಹೊಂದಿರುವವರೂ ಗಿಡ ನೆಟ್ಟು ಪೋಷಣೆ ಮಾಡಬೇಕು. ಆ ಮೂಲಕ ವಾತಾವರಣ ತಂಪಾಗಿಸಲು ಕೊಡುಗೆ ನೀಡಬೇಕು ಎಂದು ಹೇಳಿದರು.

ಆಕಾಶವಾಣಿಯ ನಿವೃತ್ತ ನಿಲಯ ನಿರ್ದೇಶಕ ಸೂರ್ಯನಾರಾಯಣ ಭಟ್, ಎಸೆಸ್ಸೆಲ್ಸಿ ಪರೀಕ್ಷೆಯಲ್ಲಿ 623 ಅಂಕ ಗಳಿಸಿದ ಪುತ್ತೂರು ವಿವೇಕಾನಂದ ಶಾಲೆಯ ಪ್ರಜ್ಞಾ ನಿಡ್ವಣ್ಣಾಯ ಅವರನ್ನು ಸನ್ಮಾನಿಸಲಾಯಿತು.

ಕಲ್ಕೂರ ಪ್ರತಿಷ್ಠಾನ ಅಧ್ಯಕ್ಷ ಪ್ರದೀಪ ಕುಮಾರ ಕಲ್ಕೂರ ಸ್ವಾಗತಿಸಿದರು. ಪ್ರಮುಖರಾದ ಡಾ.ಪಿ. ವಾಮನ ಶೆಣೈ, ಡಾ. ಹರಿಕೃಷ್ಣ ಪುನರೂರು, ಪೊಳಲಿ ನಿತ್ಯಾನಂದ ಕಾರಂತ, ಜಿ.ಕೆ. ಭಟ್ ಸೇರಾಜೆ, ಕದ್ರಿ ನವನೀತ ಶೆಟ್ಟಿ, ಆರೂರು ಕಿಶೋರ್ ರಾವ್, ಗಜಾನನ ಪೈ, ರಾಮಚಂದ್ರ ಭಟ್, ಚಂದ್ರಶೇಖರ ಮಯ್ಯ, ಸುಧಾಕರ ರಾವ್ ಪೇಜಾವರ, ಜನಾರ್ದನ ಹಂದೆ, ಡಾ. ಐ.ಜಿ. ಭಟ್, ಸಂದೀಪ್ ಜಲನ್, ವಿನೋದ ಕಲ್ಕೂರ, ಮಂಜುಳಾ ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News