ಸರಕಾರಿ ನೌಕರರ ಸಂಘದ ನಿಯೋಗ ದ.ಕ.ಜಿಲ್ಲಾಧಿಕಾರಿಯ ಭೇಟಿ
Update: 2025-07-01 20:29 IST
ಮಂಗಳೂರು: ದ.ಕ. ಜಿಲ್ಲಾ ರಾಜ್ಯ ಸರಕಾರಿ ನೌಕರರ ಸಂಘದ ಮುಖಂಡರು ಜಿಲ್ಲಾಧಿಕಾರಿ ದರ್ಶನ್. ಎಚ್ ಅವರನ್ನು ಭೇಟಿ ಮಾಡಿ ಸನ್ಮಾನಿಸಿದರು.
ಸಂಘದ ಅಧ್ಯಕ್ಷ ನವೀನ್ ಕುಮಾರ್ ನೇತೃತ್ವದಲ್ಲಿ ಪದಾಧಿಕಾರಿಗಳು ಹಾಗೂ ನಿರ್ದೇಶಕರು ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಿದರು.
ಈ ಸಂದರ್ಭ ಮಾತನಾಡಿದ ಜಿಲ್ಲಾಧಿಕಾರಿ ಸರಕಾರದ ವಿವಿಧ ಯೋಜನೆಗಳ ಅನುಷ್ಠಾನದಲ್ಲಿ ರಾಜ್ಯ ಸರಕಾರ ನೌಕರರ ಪಾತ್ರ ಮಹತ್ತರವಾಗಿದೆ. ಸರಕಾರ ಮತ್ತು ಸಾರ್ವಜನಿಕರ ನಡುವೆ ಕೊಂಡಿಯಾಗಿ ಸರಕಾರದ ಯಶಸ್ಸಿನಲ್ಲಿ ಕೈಜೋಡಿಸಬೇಕು. ಸಂಘವು ಉತ್ತಮ ಕಾರ್ಯಚಟುವಟಿಕೆಗಳನ್ನು ಹಮ್ಮಿಕೊಳ್ಳಬೇಕು ಎಂದರು.
ಈ ಸಂದರ್ಭ ಸಂಘದ ಪ್ರಧಾನ ಕಾರ್ಯದರ್ಶಿ ಲತೇಶ್ ಕುಮಾರ್, ಕೋಶಾಧಿಕಾರಿ ಸುರೇಶ್ ನಾಯಕ್, ರಾಜ್ಯ ಕಾರ್ಯಕಾರಿಣಿ ಸದಸ್ಯ ಅಂಬರೀಶ್ ಹಾಗೂ ಸಂಘದ ನಿರ್ದೇಶಕರು ಉಪಸ್ಥಿತರಿದ್ದರು.