ಬೆಳ್ತಂಗಡಿ| ಫೇಸ್‌ಬುಕ್‌ನಲ್ಲಿ ಅಶ್ಲೀಲ ಪೋಸ್ಟ್: ನವೀನ್ ಗೌಡ ವಿರುದ್ಧ ಪ್ರಕರಣ ದಾಖಲು
Update: 2025-07-01 23:34 IST
ಬೆಳ್ತಂಗಡಿ : ಸಾಮಾಜಿಕ ಜಾಲತಾಣ ಫೇಸ್‌ಬುಕ್ ನಲ್ಲಿ ಅಶ್ಲೀಲ ಪದಗಳನ್ನು ಉಪಯೋಗಿಸಿ ಪೋಸ್ಟ್ ಹಾಕಿದ ಆರೋಪದಲ್ಲಿ ನವೀನ್ ಗೌಡ ಎಂಬಾತನ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಧರ್ಮಸ್ಥಳ ಗ್ರಾಮದ ಪಾಂಗಳ ನಿವಾಸಿಯೊಬ್ಬರು ನೀಡಿರುವ ದೂರಿನಂತೆ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Naveen Gowda (https://facebook.com/naveen.gowda.938621) ಎಂಬ ಫೇಸ್ ಬುಕ್ ಖಾತೆಯಲ್ಲಿ "ಮಹೇಶ್ ಶೆಟ್ಟಿ ಎಂತವರನ್ನು ಸಾಕಿಕೊಂಡಿದ್ದಾನೆ" ಎಂದು ಆರಂಭಿಸಿ ಅಶ್ಲೀಲ ಪದಗಳನ್ನು ಬಳಸಿ ಪೋಸ್ಟ್ ಮಾಡಿರುವುದಾಗಿ ದೂರಲಾಗಿದ್ದು, ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.