ವಳಚ್ಚಿಲ್: ಕಾರಿನಲ್ಲಿ ಸ್ಟಂಟ್; ವಿದ್ಯಾರ್ಥಿಗಳಿಗೆ ದಂಡ
Update: 2025-07-02 20:41 IST
ಮಂಗಳೂರು, ಜು.2: ನಗರ ಹೊರವಲಯದ ವಳಚ್ಚಿಲ್ ಸಮೀಪ ರಾಷ್ಟ್ರೀಯ ಹೆದ್ದಾರಿ-75ರಲ್ಲಿ ಚಲಿಸುತ್ತಿದ್ದ ಕಾರಿನ ಬಾಗಿಲ ಬಳಿ ನಿಂತು ಸ್ಟಂಟ್ ಮಾಡುತ್ತಿದ್ದ ನಾಲ್ವರು ವಿದ್ಯಾರ್ಥಿಗಳ ವಿರುದ್ಧ ಪ್ರಕರಣ ದಾಖಲಿಸಿದ ಪೊಲೀಸರು ದಂಡ ವಿಧಿಸಿದ್ದಾರೆ.
ನಾಲ್ವರು ವಿದ್ಯಾರ್ಥಿಗಳು ಅಪಾಯಕಾರಿಯಾಗಿ ಸ್ಟಂಟ್ ಮಾಡುತ್ತಿದ್ದುದನ್ನು ಸಾರ್ವಜನಿಕರು ವೀಡಿಯೋ ಚಿತ್ರೀಕರಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದರು. ಈ ಬಗ್ಗೆ ಮಂಗಳೂರು ದಕ್ಷಿಣ ಸಂಚಾರ ಠಾಣೆಯ ಪೊಲೀಸರು ಕಾರ್ಯಾಚರಣೆ ನಡೆಸಿ ಕಾರು ಮತ್ತು ವಿದ್ಯಾರ್ಥಿಗಳನ್ನು ಪತ್ತೆ ಹಚ್ಚಿ 6,500 ರೂ. ದಂಡ ವಸೂಲಿ ಮಾಡಿದ್ದಾರೆ.