ಸಜಿಪನಡು : ಅಲ್ ಬಿರ್ರ್ ಶಾಲೆಯ ಪೋಷಕರಿಗೆ ಕಾರ್ಯಾಗಾರ
ಬಂಟ್ವಾಳ: ಅಲ್ ಬಿರ್ರ್ ಶಿಕ್ಷಣ ಸಂಸ್ಥೆಯು ಮಕ್ಕಳ ಭವಿಷ್ಯ ರೂಪಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ ಎಂದು ಅಲ್‌ಬಿರ್ರ‌್ ಪೇರೆಂಟಿಂಗ್ ತರಬೇತುದಾರ ಮುಫತ್ತಿಶ್ ಉಮರ್ ದಾರಿಮಿ ಸಾಲ್ಮರ ಹೇಳಿದರು.
ಸಜಿಪನಡು ನೂರಿಯ್ಯ ಪಬ್ಲಿಕ್ ಸ್ಕೂಲ್ ಅಲ್ ಬಿರ್ರ್ ಶಾಲೆಯ ಪೋಷಕರಿಗೆ ಆಯೋಜಿಸಲಾದ ಕಾರ್ಯಾ ಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಅವರು ಮಾತನಾಡಿದರು.
ಈ ಶಿಕ್ಷಣ ವ್ಯವಸ್ಥೆಯು ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಒತ್ತು ನೀಡುತ್ತದೆ. ಸಾಂಪ್ರದಾಯಿಕ ಶಿಕ್ಷಣದ ಜೊತೆಗೆ ನೈತಿಕ ಶಿಕ್ಷಣ, ಕಲೆ,ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಿಗೂ ಪ್ರಾಮುಖ್ಯತೆ ನೀಡಲಾಗುತ್ತದೆ. ಇದರಿಂದ ಮಕ್ಕಳಲ್ಲಿ ಆತ್ಮವಿಶ್ವಾಸ, ಸೃಜನಶೀಲತೆ ಮತ್ತು ನಾಯಕತ್ವದ ಗುಣಗಳು ಬೆಳೆಯುತ್ತವೆ. ಎಂದು ಉಮರ್ ದಾರಿಮಿ ಹೇಳಿದರು.
ಸಜಿಪನಡು ಕೇಂದ್ರ ಜುಮಾ ಮಸೀದಿಯ ಅಧ್ಯಕ್ಷ ಮುಹಮ್ಮದ್ ಅಶ್ರಫ್ ಹಾಜಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮಸೀದಿಯ ಉಪಾಧ್ಯಕ್ಷ ಅಬ್ದುಲ್ ರಝಾಕ್ ಕಾರ್ಯಾಗಾರ ಉದ್ಘಾಟಿಸಿದರು.
ಶಾಲಾ ಮುಖ್ಯ ಶಿಕ್ಷಕ ಅಬ್ದುಲ್ ನಾಸಿರ್ ಅನ್ಸಾರಿ ಸ್ವಾಗತಿಸಿದರು. ಸಂಸ್ಥೆಯ ಕೋಆರ್ಡಿನೇಟರ್ ಆಸಿಫ್ ಕುನಿಲ್, ಮ್ಯಾನೇಜ್ಮೆಂಟ್ ಕಮಿಟಿಯ ಸದಸ್ಯ ಅಲ್ತಾಫ್ ವಿವಿಧ ಕಾರ್ಯಕ್ರಮ ನಿರ್ವಹಿಸಿದರು. ಶಿಕ್ಷಕಿಯರಾದ ರಶೀಕ ಕಾರ್ಯಕ್ರಮ ನಿರೂಪಿಸಿದರು. ರುಮಿಝ ವಂದಿಸಿದರು.