ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಂದ ಪದವಿ, ಸ್ನಾತಕೋತ್ತರ ಪದವಿ, ಕೋರ್ಸ್‌ಗಳಿಗೆ ಅರ್ಜಿ ಆಹ್ವಾನ
ಮಂಗಳೂರು, ಜು.2: ಮಂಗಳೂರು, ಜು.2: ಕರ್ನಾಟಕ ರಾಜ್ಯದ ಅರ್ಹ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್,ಬೌದ್ಧ, ಸಿಖ್ಖ್ ಮತ್ತು ಪಾರ್ಸಿ ವಿದ್ಯಾರ್ಥಿಗಳಿಂದ 2025-26ನೇ ಸಾಲಿಗೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯದ ಪದವಿ ಶಿಕ್ಷಣದಿಂದ ವಂಚಿತರಾಗಿರುವ ಅರ್ಹ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಿಂದ ದೂರ ಶಿಕ್ಷಣ ಮಾದರಿಯಲ್ಲಿ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮಾ ಸರ್ಟಿಫಿಕೇಟ್ ಕೋರ್ಸ್‌ಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆ.25ರಂದು ಕೊನೆಯ ದಿನಾಂಕವಾಗಿದ್ದು, ವಿದ್ಯಾರ್ಥಿಯು ನೇರವಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಅಡ್ಮಿಶನ್ ಲಿಂಕ್ (https://minority.ksouportal.com) ಮೂಲಕ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ವೆಬ್‌ಸೈಟ್ https://dom.karnataka.gov.in
ಅಥವಾ ಸಹಾಯವಾಣಿ: 9900667916, 9113512565, 9611418726, 9900509959, 9035395137, 9900509959ಗೆ ಸಂಪರ್ಕಿಸುವುದು ಅಥವಾ ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಬಹುದು ಎಂದು ಪ್ರಕಟನೆ ತಿಳಿಸಿದೆ.