ಸುರತ್ಕಲ್: ಅಕ್ರಮ ಪೆಟ್ರೋಲ್ ದಂಧೆ ಪ್ರಕರಣ; ಓರ್ವ ಆರೋಪಿ ಸೆರೆ
Update: 2025-07-02 23:31 IST
ಸುರತ್ಕಲ್: ಅಕ್ರಮವಾಗಿ ಪೆಟ್ರೋಲ್ ದಂಧೆ ನಡೆಸುತ್ತಿದ್ದ ಆರೋಪದಲ್ಲಿ ಯಾರ್ಡ್ ಗೆ ದಾಳಿ ಮಾಡಿದ ಸುರತ್ಕಲ್ ಪೊಲೀಸರು ಓರ್ವ ಆರೋಪಿ ಸಹಿತ 450 ಲೀ. ಪೆಟ್ರೋಲ್ ವಶಪಡಿಸಿಕೊಂಡಿದ್ದಾರೆ.
ಬಂಧಿತನನ್ನು ಉಪ್ಪಿನಂಗಡಿ ನಿವಾಸಿ ರವಿ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಆರೋಪಿಯು ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಬಾಳ ಎಂಬಲ್ಲಿ ಗ್ಯಾಸ್ ಸಾಗಾಟದ ಬುಲೆಟ್ ಟ್ಯಾಂಕರ್ ಗಳ ಯಾರ್ಡ್ ನಲ್ಲಿ ಈ ಅಕ್ರಮ ಪೊಟ್ರೋಲ್ ಮಾರಾಟ ದಂಧೆ ನಡೆಸುತ್ತಿದ್ದ ಎಂದು ತಿಳಿದು ಬಂದಿದೆ.
ಈ ಬಗ್ಗೆ ಸುರತ್ಕಲ್ ಪೊಲೀಸರಿಗೆ ಬಂದ ಖಚಿತ ಮಾಹಿತಿಯ ಮೇರೆಗೆ ದಾಳಿ ಮಾಡಿ ಆರೋಪಿ ಸಹಿತ ಸುಮಾರು 450ಲೀ. ಪೊಟ್ರೋಲ್ ವಶಕ್ಕೆ ಪಡೆದುಕೊಂಡಿದ್ದಾರೆ.
ಈ ಸಂಬಂಧ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕಾನೂನು ಕ್ರಮಗಳನ್ನು ಕೈಗೊಂಡಿದ್ದಾರೆ ಎಂದು ತಿಳಿದು ಬಂದಿದೆ.