×
Ad

ಪುತ್ತೂರು| ಪೂರ್ವಾನುಮತಿ ಪಡೆಯದೆ ಪ್ರತಿಭಟನೆ: ಎಸ್‌ಡಿಪಿಐ ವಿರುದ್ಧ ಪ್ರಕರಣ ದಾಖಲು

Update: 2025-07-03 17:46 IST

ಪುತ್ತೂರು: ಬಿಜೆಪಿ ಮುಖಂಡನ ಪುತ್ರನಿಂದ ಅತ್ಯಾಚಾರ, ವಂಚನೆ ಪ್ರಕರಣವನ್ನು ವಿರೋಧಿಸಿ ಎಸ್‌ಡಿಪಿಐ ಪುತ್ತೂರು ವಿಧಾನ ಸಭಾ ಕ್ಷೇತ್ರ ಸಮಿತಿ ವತಿಯಿಂದ ಜು.2ರಂದು ಸಂಜೆ ಕಿಲ್ಲೆ ಮೈದಾನದ ಬಳಿ ನಡೆದ ಪ್ರತಿಭಟನೆಗೆ ಸಂಬಂಧಪಟ್ಟ ಇಲಾಖೆಯಿಂದ ಪೂರ್ವಾನುಮತಿ ಪಡೆದುಕೊಂಡಿಲ್ಲ ಎಂದು ಎಸ್‌ಡಿಪಿಐ ಪುತ್ತೂರು ಸಮಿತಿ ಅಧ್ಯಕ್ಷ ಅಶ್ರಫ್ ಬಾವು ಸಹಿತ 30 ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದೆ.

ಪುತ್ತೂರಿನ ನಗರಸಭಾ ಸದಸ್ಯ ಹಾಗೂ ಬಿಜೆಪಿ ಮುಖಂಡನ ಪುತ್ರನ ಅತ್ಯಾಚಾರ, ವಂಚನೆ ಪ್ರಕರಣವನ್ನು ಖಂಡಿಸಿ ಹಾಗೂ ಸಂತ್ರಸ್ತೆಗೆ ನ್ಯಾಯ ದೊರಕಿಸುವಂತೆ ಒತ್ತಾಯಿಸಿ ಎಸ್‌ಡಿಪಿಐ ವತಿಯಿಂದ ಪುತ್ತೂರಿನ ನಗರಸಭೆಯ ಮುಂಭಾಗದ ಕಿಲೈ ಮೈದಾಲ್ಲಿ ಪ್ರತಿಭಟನೆ ನಡೆಸಲಾಗಿತ್ತು.

ಈ ಪ್ರತಿಭಟನೆಯಲ್ಲಿ ಸಂತ್ರಸ್ತೆ ಯುವತಿಯ ತಾಯಿ ಸಹಿತ ಹಲವು ಮಂದಿ ಪಾಲ್ಗೊಂಡಿದ್ದರು. ಈ ಬಗ್ಗೆ ಸಂಬಂಧಪಟ್ಟ ಇಲಾಖೆಯಿಂದ ಪೂರ್ವಾನುಮತಿ ಪಡೆಯದೇ, ಅಕ್ರಮ ಗುಂಪು ಸೇರಿ, ಧ್ವನಿವರ್ಧಕ ಬಳಸಿ ಪ್ರತಿಭಟನೆ ನಡೆಸಲಾಗಿದೆ ಎಂದು ಆರೋಪಿಸಿ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದು, ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News