×
Ad

ಪುತ್ತೂರು| ಬಿಜೆಪಿ ಮುಖಂಡನ ಪುತ್ರನಿಂದ ಅತ್ಯಾಚಾರ, ವಂಚನೆ ಪ್ರಕರಣ: ಆರೋಪಿ ಶ್ರೀಕೃಷ್ಣಗೆ ನ್ಯಾಯಾಂಗ ಬಂಧನ

Update: 2025-07-05 20:41 IST

 ಶ್ರೀಕೃಷ್ಣ ಜೆ ರಾವ್

ಪುತ್ತೂರು: ವಿದ್ಯಾರ್ಥಿನಿಯನ್ನು ಮದುವೆಯಾಗುವುದಾಗಿ ನಂಬಿಸಿ ಗರ್ಭಿಣಿಯಾಗಿಸಿ, ಬಳಿಕ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡನ ಪುತ್ರ, ಆರೋಪಿ ಶ್ರೀಕೃಷ್ಣ ಜೆ ರಾವ್ ನನ್ನು ಪೊಲೀಸರು ಜು.4ರಂದು ರಾತ್ರಿ ಮೈಸೂರಿನಲ್ಲಿ ಬಂಧಿಸಿದ್ದು, ಜು.5ರಂದು ಸಂಜೆ ಪುತ್ತೂರು ನ್ಯಾಯಾಲಯಕ್ಕೆ ಹಾಜರು ಪಡಿಸಿ, ವಿಚಾರಣೆ ನಡೆಸಿದ ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

ಆರೋಪಿ ಪರಾರಿಯಾಗಲು ಸಹಕರಿಸಿದ ಹಿನ್ನಲೆಯಲ್ಲಿ ಆರೋಪಿಯ ತಂದೆ ಪಿಜಿ ಜಗನ್ನಿವಾಸ ರಾವ್ ಎಂಬವರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿ, ಬಂಧಿಸಿದ್ದರು. ಸಂಜೆ ಮಗನೊಂದಿಗೆ ತಂದೆಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ನ್ಯಾಯಾಲಯ ಪಿ ಜಿ ಜಗನ್ನಿವಾಸ ರಾವ್ ಗೆ ಜಾಮೀನು ಮಂಜೂರು ಮಾಡಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News