×
Ad

ಮಂಗಳೂರು: ಮಾದಕ ವಸ್ತು ಪೂರೈಸುತ್ತಿದ್ದ ಆರೋಪಿ ಸೆರೆ

Update: 2025-07-06 20:51 IST

ಧ್ರುವ್ ಶೆಟ್ಟಿ

ಮಂಗಳೂರು, ಜು.6: ನಗರಕ್ಕೆ ಮಾದಕ ವಸ್ತುಗಳನ್ನು ಪೂರೈಕೆ ಮಾಡುತ್ತಿದ್ದ ಆರೋಪದ ಮೇಲೆ ಹಾಸನ ಜಿಲ್ಲೆಯ ಸಕಲೇಶಪುರ ನಿವಾಸಿ ಧ್ರುವ್ ಡಿ. ಶೆಟ್ಟಿ (22) ಎಂಬಾತನನ್ನು ನಗರ ಪೊಲೀಸರು ಬಂಧಿಸಿದ್ದಾರೆ.

ಎ.2ರಂದು ಮಂಗಳೂರು ಸೆನ್ ಠಾಣಾ ಪೊಲೀಸರು ಎನ್‌ಡಿಪಿಎಸ್ ಕಾಯ್ದೆಯಂತೆ ಪ್ರಕರಣ ದಾಖಲಿಸಿ 5 ಮಂದಿ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿತ್ತು. ಇವರಿಗೆ ಮಾದಕ ವಸ್ತುವನ್ನು ಪೂರೈಸುತ್ತಿದ್ದ ಆರೋಪಿ ಧ್ರುವ್ ಶೆಟ್ಟಿಯನ್ನು ಮೈಸೂರಿನಲ್ಲಿ ರವಿವಾರ ಬಂಧಿಸಲಾಗಿದೆ. ಆರೋಪಿಯಿಂದ ಮೊಬೈಲ್, ದ್ವಿಚಕ್ರ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News