ಹಳೆಕೋಟೆ ಶಾಲೆಯಲ್ಲಿ ಮಾದಕ ವಸ್ತುಗಳ ಬಗ್ಗೆ ಜಾಗೃತಿ ಶಿಬಿರ
ಮಂಗಳೂರು, ಜು.8: ಸೈಯದ್ ಮದನಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಹಳೆಕೋಟೆಯಲ್ಲಿ ನಡೆಸಲ್ಪಡುತ್ತಿರುವ ಸೈಯದ್ ಮದನಿ ಉರ್ದು ಹಿರಿಯ ಪ್ರಾಥಮಿಕ ಶಾಲೆ ಮತ್ತು ಸೈಯದ್ ಮದನಿ ಪ್ರೌಢಶಾಲೆಯಲ್ಲಿ ಮಾದಕ ವಸ್ತುಗಳ ಸೇವನೆಯಿಂದ ಂದ ಉಂಟಾಗುವ ಅಪಾಯದ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮ ನಡೆಯಿತು.
ನಿಟ್ಟೆ ಮಾನಸಿಕ ಆರೋಗ್ಯ ನರ್ಸಿಂಗ್ ಕಾಲೇಜಿನ ಮಾನಸಿಕ ಆರೋಗ್ಯ ವಿಭಾಗದ ಮುಖ್ಯಸ್ಥ ಸುಕೇಶ್ ಮಾತನಾಡಿ‘ ಕ್ಯಾನ್ಸರ್‌ನಂತಹ ಮಾರಕ ರೋಗಗಳಿಗೆ ಮಾದಕ ವಸ್ತುಗಳ ಸೇವನೆ ಕಾರಣವಾಗುತ್ತದೆ ಆದುದರಿಂದ ಮಾದಕ ವಸ್ತುಗಳಿಂದ ನಾವು ದೂರವಿರಬೇಕು ಎಂದು ಮಕ್ಕಳಿಗೆ ತಿಳಿಸಿದರು.
ನಿಟ್ಟೆ ಮಾನಸಿಕ ಆರೋಗ್ಯ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಗಳು ಕಿರು ನಾಟಕದ ಮೂಲಕ ಮಾದಕ ವಸ್ತುಗಳ ಸೇವನೆಯ ದುಷ್ಪರಿಣಾಮವನ್ನು ವಿದ್ಯಾರ್ಥಿಗಳಿಗೆ ತಿಳಿಸಿದರು. ನೃತ್ಯದ ಮೂಲಕ ಕೈತೊಳೆಯುವ ಚಟುವಟಿಕೆಗಳನ್ನು ವಿದ್ಯಾರ್ಥಿಗಳಿಗೆ ಮಾಡಿ ತೋರಿಸಿದರು.
ಈ ಸಂದರ್ಭದಲ್ಲಿ ನಿಟ್ಟಿ ಮಾನಸಿಕ ಆರೋಗ್ಯ ವಿಭಾಗದ ನರ್ಸಿಂಗ್ ಕಾಲೇಜಿನ ಉಪನ್ಯಾಸಕರುಗಳಾದ ಪ್ರತಿಮಾ ಸೇರಿಗಾರ್ತಿ, ಸುವಿಕ್ಷ ಆರ್ ಭಂಡಾರಿ, ಮತ್ತು ಕಾಲೇಜಿನ ಪಿಜಿ ವಿದ್ಯಾರ್ಥಿಗಳು ಹಾಗೂ ನರ್ಸಿಂಗ್ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಶಾಲಾ ಮುಖ್ಯ ಶಿಕ್ಷಕ ಕೆಎಂ ಕೆ ಮಂಜನಾಡಿ ಅವರು ಸ್ವಾಗತಿಸಿ, ವಂದಿಸಿದರು.