×
Ad

ಅಪಾರ್ಟ್‌ಮೆಂಟ್‌ನಲ್ಲಿ ಅನಧಿಕೃತ ಡಿ.ಜೆ.ಸೌಂಡ್‌ ಬಳಕೆ ಆರೋಪ: ಪ್ರಕರಣ ದಾಖಲು

Update: 2025-07-12 21:44 IST

ಸಾಂದರ್ಭಿಕ ಚಿತ್ರ

ಮಂಗಳೂರು, ಜು.13: ಅಶೋಕನಗರದ ಅಪಾರ್ಟ್‌ಮೆಂಟ್‌ನಲ್ಲಿ ನಿಗದಿತ ಸಮಯ ಮೀರಿದರೂ ಅನಧಿಕೃತ ವಾಗಿ ಡಿ.ಜೆ.ಸೌಂಡ್ ಬಳಸಿ ಸಾರ್ವಜನಿಕರಿಗೆ ತೊಂದರೆ ನೀಡುತ್ತಿರುವ ಆರೋಪದಲ್ಲಿ ಉರ್ವಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಈ ಸಂಬಂಧ ವ್ಯಕ್ತಿಯೊಬ್ಬರು ಉರ್ವ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಅಪಾರ್ಟ್‌ಮೆಂಟ್‌ನ 5ನೇ ಮಹಡಿಯಲ್ಲಿ ನಿಗದಿತ ಸಮಯ ಮೀರಿದರೂ ಡಿ.ಜೆ. ಬಳಸಿ ಸಾರ್ವಜನಿಕರಿಗೆ ತೊಂದರೆ ನೀಡಲಾಗುತ್ತಿದೆ ಎಂಬ ಬಗ್ಗೆ ದೂರು ಬಂದ ಹಿನ್ನೆಲೆಯಲ್ಲಿ ಉರ್ವ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದಾಗ ಡಿ.ಜೆ. ಬಳಸಲು ಸಕ್ಷಮ ಪ್ರಾಧಿಕಾರದಿಂದ ಅನುಮತಿ ಪಡೆಯದಿರುವುದು ತನಿಖೆಯಿಂದ ತಿಳಿದು ಬಂದಿದೆ.

ಈ ಬಗ್ಗೆ ಕಟ್ಟಡ ಮಾಲಕರು, ಕಾರ್ಯಕ್ರಮ ಆಯೋಜಕರು, ಡಿ.ಜೆ. ಆಪರೇಟರ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News