ಉತ್ತಮ ಶಿಕ್ಷಕ ಪ್ರಶಸ್ತಿಗೆ ಅರ್ಜಿ ಆಹ್ವಾನ
Update: 2025-07-15 20:54 IST
ಮಂಗಳೂರು: ಪ್ರಸಕ್ತ (2025ನೇ) ಸಾಲಿನ ಜಿಲ್ಲಾ ಮಟ್ಟದ ಅತ್ಯುತ್ತಮ ಪ್ರಶಸ್ತಿ (ಆಫ್‌ಲೈನ್), ರಾಜ್ಯ ಮತ್ತು ರಾಷ್ಟ್ರ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ (ಆನ್‌ಲೈನ್) ನೀಡಿ ಗೌರವಿಸಲು ಆಯ್ಕೆ ಮಾಡುವ ಬಗ್ಗೆ ಶಿಕ್ಷಕರಿಂದ ಅರ್ಜಿ ಆಹ್ವಾನಿಸಲಾಗಿದೆ.
ಹೆಚ್ಚಿನ ಮಾಹಿತಿಯನ್ನು ಸಂಬಂಧಿಸಿದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಿಂದ ಪಡೆಯಬಹುದು ಎಂದು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು (ಆಡಳಿತ) ಪ್ರಕಟನೆಯಲ್ಲಿ ತಿಳಿಸಿದ್ದಾರೆ.