×
Ad

ಕಾನೂನು ಪದವೀಧರರಿಗೆ ಉಚಿತ ತರಬೇತಿ

Update: 2025-07-18 19:47 IST

ಮಂಗಳೂರು, ಜು.18: ಹಿಂದುಳಿದ ವರ್ಗಗಳ ಅರ್ಹ ಅಭ್ಯರ್ಥಿಗಳಿಗೆ ಸರಕಾರಿ ವಕೀಲರ ಅಧೀನದಲ್ಲಿ 4 ವರ್ಷಗಳ ಅವಧಿಯ ಉಚಿತ ಕಾನೂನು ತರಬೇತಿಯನ್ನು ನೀಡುವ ಕಾರ್ಯಕ್ರಮದಡಿ ಕಾನೂನು ತರಬೇತಿ ಪಡೆಯಲು ಬಯಸುವ ಹಿಂದುಳಿದ ವರ್ಗಗಳ ಪ್ರ ವರ್ಗ-1, 2ಎ, 3ಎ ಮತ್ತು 3ಬಿ ಗೆ ಸೇರಿದ ಕಾನೂನು ಪದವೀಧರರಿಂದ 2025-26ನೇ ಸಾಲಿಗೆ ಅರ್ಜಿ ಆಹ್ವಾನಿಸಲಾಗಿದೆ.

ಅಭ್ಯರ್ಥಿಯು ಬಾರ್ ಕೌನ್ಸಿಲ್‌ನಲ್ಲಿ ನೋಂದಾಯಿತರಾದ ಕಾನೂನು ಪದವೀಧರರಾಗಿರಬೇಕು. ಕುಟುಂಬದ ವಾರ್ಷಿಕ ಆದಾಯವು ಪ್ರವರ್ಗ-1ರ ಅಭ್ಯರ್ಥಿಗಳಿಗೆ 3.50 ಲಕ್ಷ ರೂ.ಮತ್ತು ಇತರ ಹಿಂದು ಳಿದ ವರ್ಗಗಳ ಅಭ್ಯರ್ಥಿಗಳಿಗೆ 2.50 ಲಕ್ಷ ರೂ. ಮೀರಿರಬಾರದು. ಪ್ರವರ್ಗ-1ರ ಅಭ್ಯರ್ಥಿಗಳು 40 ವರ್ಷ ಮತ್ತು ಇತರ ಹಿಂದುಳಿದ ವರ್ಗಗಳ ಅಭ್ಯರ್ಥಿಗಳು 38 ವರ್ಷ ಪ್ರಾಯದೊಳಗಿನವರಾಗಿರಬೇಕು. ತರಬೇತಿಯ ಅವಧಿಯಲ್ಲಿ ಹಾಜರಾತಿಗೆ ಅನುಸಾರವಾಗಿ ಮಾಸಿಕ 4,000 ರೂ. ತರಬೇತಿ ಭತ್ತೆಯನ್ನು ಪಾವತಿಸಲಾಗುತ್ತದೆ.

ಅರ್ಜಿಯೊಂದಿಗೆ ವರ್ಗಾವಣೆ ಪ್ರಮಾಣ ಪತ್ರದ ಪ್ರತಿ, ಪದವಿ/ಕಾನೂನು ಪದವಿಯ ಅಂಕ ಪಟ್ಟಿಗಳು, ಬಾರ್ ಕೌನ್ಸಿಲ್‌ನಲ್ಲಿ ನೋಂದಾಯಿತರಾಗಿರುವ ಬಗ್ಗೆ ಪ್ರಮಾಣ ಪತ್ರ, ಜಾತಿ ಆದಾಯ ಪ್ರಮಾಣ ಪತ್ರ ಮತ್ತು ಇತ್ತೀಚಿನ ಎರಡು ಭಾವಚಿತ್ರ (ಪಾಸ್ ಪೋರ್ಟ್ ಸೈಜ್) ಗಳನ್ನು ಲಗತ್ತಿಸಬೇಕು ಹಾಗೂ ಅರ್ಜಿಯನ್ನು ಆ.18ರೊಳಗೆ ಕಚೇರಿಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗೆ ಅಥವಾ ನಿಗದಿತ ಅರ್ಜಿ ನಮೂನೆಯನ್ನು ಬಿಜೈ-ಕಾಪಿಕಾಡ್, ಆನೆಗುಂಡಿ ರೋಡ್‌ನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಯ ಕಚೇರಿಯಿಂದ ಪಡೆಯಬಹುದು ಎಂದು ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News