ಅಡಿಕೆ ಬೆಳೆ: ರೋಗ ನಿರ್ವಹಣೆಗೆ ಸಹಾಯಧನ ಲಭ್ಯ
ಮಂಗಳೂರು, ಜು.21 : ಜುಲೈ ತಿಂಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗುತ್ತಿರುವುದರಿಂದ, ಜಿಲ್ಲೆಯ ಹಲವೆಡೆ ಅಡಿಕೆಯಲ್ಲಿ ಕೊಳೆರೋಗ ಕಾಣಿಸಿಕೊಂಡಿರುವುದು ತೋಟಗಾರಿಕೆ ಇಲಾಖೆಯ ಗಮನಕ್ಕೆ ಬಂದಿರುತ್ತದೆ. ಅಲ್ಲದೇ ಮಳೆ ಇದೇ ರೀತಿ ಮುಂದುವರೆದರೆ ಆಗಸ್ಟ್ ತಿಂಗಳ ನಂತರ ಅಡಿಕೆ ಎಲೆ ಚುಕ್ಕೆ ರೋಗ ವ್ಯಾಪಕವಾಗಿ ಹರಡುವ ಸಾಧ್ಯತೆಯಿರುವ ಕಾರಣ ರೈತರು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ತಿಳಿಸಲಾಗಿದೆ.
ಅಡಿಕೆ ಬೆಳೆಯಲ್ಲಿ ಸಮಗ್ರ ಪೋಷಕಾಂಶ/ಕೀಟ/ರೋಗ ನಿರ್ವಹಣೆ ಸಂಬಂಧ ಗೊಬ್ಬರ/ಸೂಕ್ಷ್ಮ ಪೋಷಕಾಂಶ/ಕೀಟನಾಶಕ/ಶಿಲೀಂಧ್ರನಾಶಕಗಳನ್ನು ಖರೀದಿಸುವ ರೈತರಿಗೆ ಸಮಗ್ರ ತೋಟಗಾರಿಕೆ ಅಭಿವೃದ್ಧಿ ಮಿಷನ್ ಯೋಜನೆಯ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಉಪಯೋಜನೆಯಡಿ ನವೀನ ತಂತ್ರಜ್ಞಾನಗಳು ಕಾರ್ಯಕ್ರಮದಡಿ ಸಹಾಯಧನ ಸೌಲಭ್ಯ ಲಭ್ಯವಿರುತ್ತದೆ. ರೈತರು ಯೋಜನೆಯ ಸದುಪಯೋಗ ಪಡೆದುಕೊಳ್ಳಬಹುದು.
ಹೆಚ್ಚಿನ ಮಾಹಿತಿಗೆ ದ.ಕ ತೋಟಗಾರಿಕೆ ಉಪನಿರ್ದೇಶಕ ಮಂಜುನಾಥ ಡಿ- 9448999226, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶ ಪ್ರವೀಣ ಕೆ- 9449258204, ಬಂಟ್ವಾಳ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಜೋ ಪ್ರದೀಪ್ ಡಿಸೋಜ,- 9448206393, ಪುತ್ತೂರು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕಿ ರೇಖಾ ಎ- 9731854527, ಸುಳ್ಯ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಪ್ರಮೋದ ಸಿ.ಎಮ್- 9880993238, ಬೆಳ್ತಂಗಡಿ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಚಂದ್ರಶೇಖರ ಕೆ.ಎಸ್.- 9448336863 ಇವರನ್ನು ಸಂಪರ್ಕಿಸಬಹುದು ಎಂದು ತೋಟಗಾರಿಕೆ ಉಪನಿರ್ದೇಶಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.