ಅಶ್ರಫ್ ತಂಙಳ್ ಆದೂರ್‌ಗೆ ಎಪಿಜೆ ಅಬ್ದುಲ್ ಕಲಾಮ್ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
Update: 2025-07-28 18:53 IST
ಮಂಗಳೂರು: ಕರ್ನಾಟಕ ರಾಜ್ಯ ಹಜ್ ಸಮಿತಿಯ ಸದಸ್ಯ ಸೈಯದ್ ಮುಹಮ್ಮದ್ ಅಶ್ರಫ್ ಸಖಾಫ್ ಅಲ್ ಮದನಿ ಆದೂರ್ ತಂಙಳ್ ಅವರಿಗೆ ಡಾ. ಎ.ಪಿ.ಜೆ ಅಬ್ದುಲ್ ಕಲಾಂ ರಾಷ್ಟ್ರೀಯ ಪ್ರಶಸ್ತಿಯನ್ನು ರವಿವಾರ ಪ್ರದಾನ ಮಾಡಲಾಯಿತು.
ಕೋಲ್ಕತ್ತದ ಅಹಲಿಯಾ ಯುನಿವರ್ಸಿಟಿ ಕ್ಯಾಂಪಸ್‌ನಲ್ಲಿ ನಡೆಯುವ ಸಮಾರಂಭದಲ್ಲಿ ಕೋಲ್ಕತ್ತಾ ಮೇಯರ್ ಮತ್ತು ಪಶ್ಚಿಮ ಬಂಗಾಳದ ಸಚಿವ ಫರ್ಹಾದ್ ಹಕೀಮ್ ಅವರು ಅಶ್ರಫ್ ತಂಙಳ್‌ರಿಗೆ ಪ್ರಶಸ್ತಿಯನ್ನು ಪ್ರದಾನ ಮಾಡಿದರು.
ಆದೂರು ತಂಙಳ್ ಅವರ ಸಾಮಾಜಿಕ ಮತ್ತು ಶೈಕ್ಷಣಿಕ ಸೇವೆಯನ್ನು ಗುರುತಿಸಿ ಈ ಪ್ರಶಸ್ತಿ ನೀಡಲಾಗಿದೆ. ಅವರು ಮಜ್ಲಿಸುಶ್ಶಿಫಾ ಎಜುಕೇಶನಲ್ ಟ್ರಸ್ಟ್ ಅಡಿಯಲ್ಲಿ ಕರ್ನಾಟಕ ಮತ್ತು ಕೇರಳದಲ್ಲಿ ಹಲವು ಶೈಕ್ಷಣಿಕ ಹಾಗೂ ಸೇವಾ ಕಾರ್ಯಗಳನ್ನು ನಡೆಸುತ್ತಿದ್ದಾರೆ.