ಕರಂಬಾರ್ ಶಾಲೆಯಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ
Update: 2025-07-31 19:52 IST
ಬಜ್ಪೆ: ಕರಂಬಾರಿನ ದ.ಕ.ಜಿ.ಪ.ಹಿ.ಪ್ರಾ ಶಾಲೆಯ ಹಳೆ ವಿದ್ಯಾರ್ಥಿ ಸಂಘ (ರಿ) ಮತ್ತು ಶಾಲಾಭಿವೃದ್ಧಿ ಸಮಿತಿಯ ವತಿಯಿಂದ ಕರಂಬಾರು ಶಾಲಾ ಮೈದಾನದಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ ನಡೆಯಿತು.
ಶಾಸಕ ಉಮಾನಾಥ ಕೋಟ್ಯಾನ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಸಂಪನ್ಮೂಲ ವ್ಯಕ್ತಿ ಯಾಗಿ ವೀಣಾ ಶೆಟ್ಟಿ ಭಾಗವಹಿಸಿದ್ದರು. ಹ.ವಿ.ಸಂಘದ ಅಧ್ಯಕ್ಷ ಸತೀಶ್ ದೇವಾಡಿಗ ಸಭೆಯ ಅಧ್ಯಕ್ಷತೆ ವಹಿಸಿದ್ದರು.
ವೇದಿಕೆಯಲ್ಲಿ ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ಗುಣಪಾಲ್ ದೇವಾಡಿಗ, ಜಯಂತ ಅಮೀನ್, ಸತೀಶ್ ಸಾಲಿಯಾನ್ ಉಪಸ್ಥಿತರಿದ್ದರು, ಮುಖ್ಯ ಶಿಕ್ಷಕಿ ಉಷಾಕಿರಣ್ ಸ್ವಾಗತಿಸಿದರು. ಹ.ವಿ.ಸಂಘದ ಕೋಶಾಧಿಕಾರಿ ವಿನೋದ್ ಅರ್ಬಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಕೃಷ್ಣಾನಂದ ವಂದಿಸಿದರು. ಶಿಕ್ಷಕಿ ಗೀತಾ ಕಾರ್ಯಕ್ರಮ ನಿರೂಪಿಸಿದರು.