ಯುವನಿಧಿ ನೋಂದಣಿ ಪ್ರಚಾರಕ್ಕೆ ಚಾಲನೆ
Update: 2025-07-31 20:30 IST
ಮಂಗಳೂರು: ರಾಜ್ಯ ಸರಕಾರದ ಯುವನಿಧಿ ಯೋಜನೆಗೆ 2025ನೆ ಸಾಲಿನಲ್ಲಿ ತೇರ್ಗಡೆಯಾದ ಅಭ್ಯರ್ಥಿಗಳ ಅರ್ಜಿ ಸಲ್ಲಿಕೆ ಪ್ರಾರಂಭವಾಗಿದೆ. ಅ ಹಿನ್ನೆಲೆಯಲ್ಲಿ ದ.ಕ.ಜಿಪಂನಲ್ಲಿ ಗುರುವಾರ ನಡೆದ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಸಭೆಯಲ್ಲಿ ನೋಂದಣಿ ಪ್ರಚಾರ ನಡೆಸಲು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಭರತ್ ಮುಂಡೋಡಿ ಚಾಲನೆ ನೀಡಿದರು.
ದ.ಕ.ಜಿಪಂ ಸಿಇಒ ಡಾ. ನಾರ್ವಡೆ ವಿನಾಯಕ ಕರ್ಬಾರಿ, ಜಿಲ್ಲಾ ಕೌಶಲಾಭಿವೃದ್ಧಿ ಅಧಿಕಾರಿ ಪ್ರದೀಪ್ ಡಿಸೋಜ, ಜಿಲ್ಲಾ ಉದ್ಯೋಗಾಧಿಕಾರಿ ಹಾಗೂ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಸದಸ್ಯರ ಸಮ್ಮುಖದಲ್ಲಿ ಯುವನಿಧಿ ಯೋಜನೆಯ ಪ್ರಚಾರಕ್ಕೆ ಸಂಬಂಧಿಸಿದ ಬ್ಯಾನರ್, ಪೋಸ್ಟರ್‌ಗಳನ್ನು ಅನಾವರಣಗೊಳಿಸಲಾಯಿತು.