×
Ad

ಬಜೆಟ್‌ನಲ್ಲಿ ರಾಜ್ಯಕ್ಕೆ ಯಾವುದೇ ಹೊಸ ಯೋಜನೆ ನೀಡಿಲ್ಲ: ಐವನ್ ಡಿಸೋಜ

Update: 2026-02-01 21:43 IST

ಮಂಗಳೂರು : ಕೇಂದ್ರ ಸರಕಾರ ಮಂಡಿಸಿದ ಬಜೆಟ್‌ನಲ್ಲಿ ರಾಜ್ಯಕ್ಕೆ ಯಾವುದೇ ಹೊಸ ಯೋಜನೆಯನ್ನು ನೀಡಿಲ್ಲ. ಹಿಂದೆ ಘೋಷಿಸಿದ ಯೋಜನೆಗಳಿಗೆ ಅನುದಾನ ಒದಗಿಸಿಲ್ಲ. ಇಡೀ ದೇಶದಲ್ಲಿ ಅತ್ಯಂತ ಹೆಚ್ಚು ತೆರಿಗೆ ನೀಡುವ ರಾಜ್ಯಗಳ ಪೈಕಿ ಎರಡನೇ ಸ್ಥಾನದಲ್ಲಿರುವ ಕರ್ನಾಟಕ್ಕೆ ದೊಡ್ಡ ಮೋಸ ಮಾಡಿದೆ. ಕರ್ನಾಟಕ ಅಭಿವೃದ್ಧಿಯನ್ನು ಕುಂಠಿತಗೊಳಿಸುವ ರೀತಿಯಲ್ಲಿ ಮಲತಾಯಿ ಧೋರಣೆ ಮಾಡಲಾಗಿದೆ. ಉದ್ಯೋಗ ಸೃಷ್ಟಿಗೆ ಒತ್ತು ನೀಡಿಲ್ಲ, ಎನ್‌ಐಟಿಕೆಯನ್ನು ಐಐಟಿ ಮಾಡುವ ಬೇಡಿಕೆಗೆ ಸ್ಪಂದಿಸಿಲ್ಲ. ಕರ್ನಾಟಕ್ಕೆ ಒಂದು ದೊಡ್ಡ ಚೊಂಬು ಕೊಟ್ಟಿದ್ದಾರೆ. ಆದರೆ ಚೊಂಬಿನಲ್ಲಿ ನೀರಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಐವನ್ ಡಿ ಸೋಜ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News