ಸೆ.11ರ ಬಂದ್‌ಗೆ ಬೆಂಬಲವಿಲ್ಲ: ಬಸ್ ಮಾಲಕರ ಸಂಘ
Update: 2023-09-10 21:12 IST
ಫೈಲ್ ಫೋಟೊ
ಮಂಗಳೂರು, ಸೆ.10: ರಾಜ್ಯ ಸರಕಾರ ಜಾರಿಗೊಳಿಸಿರುವ ಶಕ್ತಿ ಯೋಜನೆಯಿಂದ ಖಾಸಗಿ ವಾಹನಗಳಿಗೆ ಕಷ್ಟವಾಗುತ್ತಿದ್ದು, ಇದಕ್ಕೆ ಸೂಕ್ತ ಪರಿಹಾರ ಕಲ್ಪಿಸಬೇಕು ಎಂದು ಆಗ್ರಹಿಸಿ ಖಾಸಗಿ ವಾಹನಗಳ ಒಕ್ಕೂಟವು ಸೆ.11ರಂದು ವಾಹನಗಳ ಓಡಾಟ ಸ್ಥಗಿತಗೊಳಿಸುವ ಮೂಲಕ ಬಂದ್‌ಗೆ ಕರೆ ನೀಡಿದೆ.
ಆದರೆ, ಸೆ.11ರ ಬಂದ್‌ಗೆ ನಮ್ಮ ಬೆಂಬಲವಿಲ್ಲ. ದ.ಕ.ಜಿಲ್ಲೆಯಲ್ಲಿ ಖಾಸಗಿ ಬಸ್‌ಗಳು ಎಂದಿನಂತೆ ಸಂಚರಿಸಲಿದೆ ಎಂದು ದ.ಕ. ಜಿಲ್ಲಾ ಬಸ್ ಮಾಲಕರ ಸಂಘದ ಅಧ್ಯಕ್ಷ ಅಝೀಝ್ ಪರ್ತಿಪ್ಪಾಡಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.