×
Ad

ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಲು ಸೂಚನೆ

Update: 2023-10-25 20:23 IST

ಸಾಂದರ್ಭಿಕ ಚಿತ್ರ

ಮಂಗಳೂರು : ಕರ್ನಾಟಕ ನೈರುತ್ಯ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಗೆ ಹೆಸರು ನೋಂದಾಯಿಸಲು ಅರ್ಜಿ ಆಹ್ವಾನಿಸಲಾಗಿದೆ.

ಕರ್ನಾಟಕ ನೈರುತ್ಯ ಪದವೀಧರರ ಶಿಕ್ಷಕರ ಕ್ಷೇತ್ರಗಳ ಪದವೀಧರರ ಅಥವಾ ಶಿಕ್ಷಕರ ಮತ ಕ್ಷೇತ್ರಗಳ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಲು ಅರ್ಹರು ನಮೂನೆ 18 ಮತ್ತು ನಮೂನೆ 19ರಲ್ಲಿ ನ.6 ರೊಳಗೆ ಅರ್ಜಿ ಸಲ್ಲಿಸ ಬಹುದು. ಮಂಗಳೂರು ತಾಲೂಕು ಗ್ರಾಮಾಂತರಕ್ಕೆ ಸಂಬಂಧಿಸಿದ ಅರ್ಜಿಗಳನ್ನು ನೇರವಾಗಿ ತಾಲೂಕು ಕಚೇರಿಗೆ ನೀಡಬಹುದು. ಹೆಚ್ಚಿನ ಮಾಹಿತಿ ಹಾಗೂ ಅರ್ಜಿ ನಮೂನೆಗಾಗಿ ಮುಖ್ಯ ಚುನಾವಣಾ ಅಧಿಕಾರಿಗಳ ವೆಬ್‌ಸೈಟ್ www.ceokarnataka.kar.nik.in ನ್ನು ಸಂಪರ್ಕಿಸಬಹುದು ಎಂದು ಮಂಗಳೂರು ತಾಲೂಕು ತಹಶೀಲ್ದಾರ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News