ಅ.11: ದ. ಕ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಬೆಳ್ತಂಗಡಿಗೆ
ಬೆಳ್ತಂಗಡಿ: ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅ11ರಂದು ಬೆಳ್ತಂಗಡಿಗೆ ಆಗಮಿಸಲಿದ್ದು ತಾಲೂಕಿನ ಜನರ ಬಹುದಿನಗಳ ಬೇಡಿಕೆಯಾಗಿದ್ದ ಇಂದಿರಾ ಕ್ಯಾಂಟೀನ್ ಉದ್ಘಾಟನೆ ಸೇರಿದಂತೆ ವಿವಿಧ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಕಾರ್ಯಕ್ರಮಗಳಲ್ಲಿ ಭಾಗಿಗಳಾಗಲಿದ್ದಾರೆ ಎಂದು ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ತಿಳಿಸಿದ್ದಾರೆ.
ಬೆಳ್ತಂಗಡಿಯಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಈ ವಿಚಾರ ತಿಳಿಸಿದರು.
ಸೆ11ರಂದು ಬೆಳ್ತಂಗಡಿಗೆ ಆಗಮಿಸಲಿರುವ ಜಿಲ್ಲಾ ಉಸ್ತುವಾರಿ ಸಚಿವರು ಪೂಂಜಾಲಕಟ್ಟೆಯಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಡಿ ದೇವರಾಜ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ಪೂರ್ವ ಬಾಲಕರ ವಿಧ್ಯಾರ್ಥಿ ನಿಲಯದ ಉಧ್ಘಾಟನೆ, ಮಾಲಾಡಿ ಸಬರ ಬೈಲಿನಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ದೇವರಾಜ ಅರಸು ಹಿಂದುಳಿದ ವರ್ಗಗಳ ಮೆಟ್ರಕ್ ನಂತರದ ಬಾಲಕಿಯರ ವಿಧ್ಯಾರ್ಥಿ ನಿಲಯ ಮಡಂತ್ಯಾರು ಇದರ ಉದ್ಘಾಟನೆ, ಕಾಶಿಬೆಟ್ಟುವಿನಲ್ಲಿ ದೇವರಾಜ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಬಾಲಕರ ವಿಧ್ಯಾರ್ಥಿ ನಿಲಯ ಉಜಿರೆ ಇದರ ಶಿಲಾನ್ಯಾಸ ಕಾರ್ಯಕ್ರಮ, ಬೆಳ್ತಂಗಡಿಯಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಇಂದಿರಾ ಕ್ಯಾಂಟೀನ್ ಇದರ ಉದ್ಘಾಟನೆ, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯ ಬೆಳ್ತಂಗಡಿ, ಇದರ ಶಿಲಾನ್ಯಾಸ, ಹಾಗೂ 94.ಸಿ ಹಕ್ಕುಪತ್ರಗಳ ವಿತರಣಾ ಕಾರ್ಯಕ್ರಮಗಳಲ್ಲಿ ಸಚಿವರು ಭಾಗವಹಿಸಲಿದ್ದಾರೆ. ಮಧ್ಯಾಹ್ನ ಬೆಳ್ತಂಗಡಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆ ನಡೆಯಲಿದ್ದು ಸಭೆಯಲ್ಲಿ ಸಚಿವರು ಉಭಯ ಜಿಲ್ಲೆಗಳಿಂದ ವಿವಿಧ ನಿಗಮಗಳ ಅಧ್ಯಕ್ಷರಾಗಿ ಆಯ್ಕೆಯಾಗಿರುವವರನ್ನು ಸನ್ಮಾನಿಸಲಿದ್ದಾರೆ ಎಂದು ಅವರು ಮಾಹಿತಿ ನೀಡಿದರು.
ಪತ್ರಿಕಾಗೋಷ್ಠಿಯಲ್ಲಿ ಪಕ್ಷದ ಬ್ಲಾಕ್ ಸಮಿತಿ ಅಧ್ಯಕ್ಷರುಗಳಾದ ಸತೀಶ್ ಕಾಶೀಪಟ್ಣ, ನಾಗೇಶ್ ಕುಮಾರ್, ಜಿಲ್ಲಾ ಕೆಡಿಪಿ ಸದಸ್ಯ ಸಂತೋಷ್ ಕುಮಾರ್, ಗ್ಯಾರಂಟಿ ಸಮಿತಿ ಅಧ್ಯಕ್ಷ ಪದನಾಭ ಸಾಲಿಯಾನ್ ಪಟ್ಟಣ ಪಂಚಾಯತ್ ಸದಸ್ಯ ಜಗದೀಶ್, ಪುನೀತ್ ಕುಮಾರ್ ಮಾಲಾಡಿ, ಶೋಭಾ ನಾರಾಯಣ ಗೌಡ ರಾಘವೇಂದ್ರ ಮೇಲಂತಬೆಟ್ಟು ಹಾಗೂ ಇತರರು ಇದ್ದರು