×
Ad

ಆನ್‌ಲೈನ್ ವಂಚನೆ: ಪ್ರಕರಣ ದಾಖಲು

Update: 2023-11-18 23:01 IST

ಮಂಗಳೂರು, ನ.18: ಆನ್‌ಲೈನ್ ಸ್ಟಾಕ್ ಟ್ರೇಡಿಂಗ್ ಆ್ಯಪ್ ಮೂಲಕ ಹಣ ಸಂಪಾದಿಸುವ ಆಮಿಷಕ್ಕೆ ಒಳಗಾದ ವ್ಯಕ್ತಿಯೊಬ್ಬರು 25 ಲಕ್ಷ ರೂ. ಕಳೆದುಕೊಂಡಿರುವ ಬಗ್ಗೆ ಮಂಗಳೂರು ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತನ್ನನ್ನು ಆ್ಯಪ್‌ಗೆ ಸೇರಿಸಿದ ವ್ಯಕ್ತಿ ಮೊದಲಿಗೆ ಸಣ್ಣ ಟಾಸ್ಕ್ ನೀಡಿ ಸ್ವಲ್ಪ ಪ್ರಮಾಣದ ಹಣ ನೀಡಿದ್ದಾರೆ. ಬಳಿಕ ದೊಡ್ಡ ಟಾಸ್ಕ್‌ನಲ್ಲಿ ಭಾಗವಹಿಸುವಂತೆ ಮಾಡಿ 50,000 ರೂ., 4,50,000 ರೂ, 15,00,000 ರೂ., 5,00,000 ರೂ. ನಂತೆ ಹೂಡಿಕೆ ಮಾಡಿದ್ದಾರೆ. ಹೂಡಿಕೆಯಾದ ಹಣವನ್ನು ವಿತ್ ಡ್ರಾ ಮಾಡಲು ಪ್ರಯತ್ನಿಸಿದಾಗ ಹಣವು ವಿತ್ ಡ್ರಾ ಆಗಿಲ್ಲ. ಹಂತ ಹಂತವಾಗಿ ಹೀಗೆ 25 ಲಕ್ಷ ರೂ. ವರ್ಗಾವಣೆ ಮಾಡಿಕೊಂಡು ವಂಚನೆ ಮಾಡಲಾಗಿದೆ ಎಂದು ವಂಚನೆಗೊಳಗಾದ ವ್ಯಕ್ತಿ ದೂರಿನಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News