×
Ad

ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಮೇ 4ರ ಬೆಳಗ್ಗೆ 6ರವರೆಗೆ ಮದ್ಯದಂಗಡಿಗಳನ್ನು ಮುಚ್ಚಲು ಆದೇಶ

Update: 2025-05-02 12:56 IST

ಮಂಗಳೂರು: ರೌಡಿ ಶೀಟರ್ ಸುಹಾಸ್ ಶೆಟ್ಟಿ ಹತ್ಯೆಯ ಹಿನ್ನೆಲೆಯಲ್ಲಿ ಸಾರ್ವಜನಿಕ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಮೇ 2ರಿಂದ ಮೇ 4ರ ಬೆಳಗ್ಗೆ 6 ಗಂಟೆಯ ವರೆಗೆ ಎಲ್ಲಾ ಮಾದರಿಯ ಮದ್ಯ ಮಾರಾಟದ ಅಂಗಡಿಗಳನ್ನು ಮುಚ್ಚಲು ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಆದೇಶಿಸಿದ್ದಾರೆ.

ಸುಹಾಸ್ ಶೆಟ್ಟಿ ಕೊಲೆಯ ಹಿನ್ನಲೆಯಲ್ಲಿ ಮಂಗಳೂರು ಕಮಿಷನರೇಟ್ ವ್ಯಾಪ್ತಿಗಳಲ್ಲಿ ಪ್ರಕ್ಷುಬ್ಧ ಪರಿಸ್ಥಿತಿಯು ಬೂದಿ ಮುಚ್ಚಿದ ಕೆಂಡದಂತಿದೆ. ಆದ್ದರಿಂದ ಕಿಡಿಗೇಡಿಗಳು ಅಮಲು ಪದಾರ್ಥ ಸೇವಿಸಿ ಅಹಿತಕರ ಘಟನೆಗಳಿಗೆ ಕಾರಣರಾಗಿ ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ಉಂಟಾಗುವ ಸಾಧ್ಯತೆ ಇರುವುದರಿಂದ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಮಂಗಳೂರು ಪೊಲೀಸ್ ಆಯುಕ್ತರ ಪ್ರಸ್ತಾವನೆಯಂತೆ ಈ ಆದೇಶ ಹೊರಡಿಸಲಾಗಿದೆ ಎಂದು ಜಿಲ್ಲಾ ದಂಡಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಈ ಆದೇಶ ಹೊರಡಿಸಿದ್ದಾರೆ.

ಈ ಆದೇಶದನ್ವಯ ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿರುವ ಎಲ್ಲಾ ಮಾದರಿಯ ಮದ್ಯ ಮಾರಾಟದ ಅಂಗಡಿಗಳನ್ನು ಮುಚ್ಚಲು ಹಾಗೂ ಎಲ್ಲಾ ವಿಧದ ಅಮಲು ಪದಾರ್ಥಗಳ ಮಾರಾಟವನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿಯ ಪ್ರಕಟನೆ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News