ಮುಂಬೈಯಲ್ಲಿ ಹೊರನಾಡ ಕನ್ನಡ ಸಂಸ್ಕೃತಿ ಸಂಭ್ರಮ
ಮುಂಬೈ, ಆ.1: ಭಾರತ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ, ಕರ್ನಾಟಕ ಸಂಘ ಅಂದೇರಿ ಮುಂಬೈ ಹಾಗೂ ವಿವಿಧ ಕನ್ನಡ ಪರ ಸಂಘ ಸಂಸ್ಥೆಗಳ ಸಹಯೋಗ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯವರ ಸಹಕಾರದಲ್ಲಿ ಇತ್ತೀಚೆಗೆ ಮುಂಬೈನಲ್ಲಿ ಹೊರನಾಡ ಕನ್ನಡ ಸಂಸ್ಕೃತಿ ಸಂಭ್ರಮ-2023 ಕಾರ್ಯಕ್ರಮ ನಡೆಯಿತು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಶಿವರಾಜ್ ತಂಗಡಗಿ ಕಾರ್ಯಕ್ರಮ ಉದ್ಘಾಟಿಸಿದರು. ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಅಧ್ಯಕ್ಷತೆ ವಹಿಸಿದರು.
ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ನಿಕಟಪೂರ್ವ ಅಧ್ಯಕ್ಷ. ಡಾ.ಸಿ. ಸೋಮಶೇಖರ್, ಸಹಕಾರಿ ಧುರೀಣ ಡಾ. ರಾಜೇಂದ್ರ ಕುಮಾರ್, ವಿದ್ವಾಂಸ ಪ್ರೊ. ರಾಧಾಕೃಷ್ಣ, ಗ್ರಂಥಾಲಯ ಇಲಾಖೆಯ ನಿರ್ದೇಶಕ ಡಾ. ಸತೀಶ್ ಕುಮಾರ್ ಹೊಸಮನಿ, ಅಮರನಾಥ್ ಶೆಟ್ಟಿ ತುಮಕೂರು ಅವರಿಗೆ ಗೌರವ ಪ್ರಶಸ್ತಿ ಪ್ರದಾನಿಸಲಾಯಿತು.
ಗಣ್ಯರಾದ ಶಿವಗಂಗಾ ಮೇಗಣ ಗವಿಮಠದ ಶಾಂತವೀರ ಸ್ವಾಮೀಜಿ, ವಿಶ್ವ ಕನ್ನಡ ಸಂಸ್ಕೃತಿ ಸಮ್ಮೇಳನದ ಸ್ಥಾಪಕ ಅಧ್ಯಕ್ಷ ಕೆಪಿ ಮಂಜುನಾಥ್ ಸಾಗರ್, ಗಡಿನಾಡು ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಪ್ರಕಾಶ್ ಮತ್ತಿಹಳ್ಳಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕ ವಿಶ್ವನಾಥ್ ಹಿರೇಮಠ್, ಪ್ರಭಾ ಸುವರ್ಣ, ನವೀನ್ ಗೌಡ ಉಪಸ್ಥಿತರಿದ್ದರು.
ಕರ್ನಾಟಕ ಸಂಘ ಅಂಧೇರಿ ಅಧ್ಯಕ್ಷ ಅಧ್ಯಕ್ಷ ಭಾಸ್ಕರ ಸುವರ್ಣ ಸಸಿಹಿತ್ಲು, ಪದಾಧಿಕಾರಿಗಳಾದ ಉದಯ ಕೇರಗಲ್ಲ, ಜಗಜೀವನ ಪೂಜಾರಿ, ಸತೀಶ್ ಕಲಕೇರಾ, ಕೃಷ್ಣ ಶೆಟ್ಟಿ, ರವೀಂದ್ರ ಶೆಟ್ಟಿ, ದಿನೇಶ ಆರ್. ಕೆ. ಮತ್ತಿತರರಿದ್ದರು.