×
Ad

ಪಣಂಬೂರು: ಬಬ್ಬುಸ್ವಾಮಿ ದೈವಸ್ಥಾನದಲ್ಲಿ ಮಡಿಕೇರಿಯ ವ್ಯಕ್ತಿ ಆತ್ಮಹತ್ಯೆ

Update: 2023-10-10 22:23 IST

ಪಣಂಬೂರು: ಮಡಿಕೇರಿಯ ವ್ಯಕ್ತಿಯೊಬ್ಬರು ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯ ಬಬ್ಬು ಸ್ವಾಮಿ ದೈವಸ್ಥಾನದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ರೀತಿಯಲ್ಲಿ ಪತ್ತೆಯಾಗಿದ್ದಾರೆ.

ಮೃತರನ್ನು ಕೊಡಗು ಜಿಲ್ಲೆ ಮಡಿಕೇರಿ ತಾಲೂಕಿನ ಗೋಪಾಲ (64) ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಗೋಪಾಲ ಅವರು ಮಡಿಕೇರಿಯಿಂದ ಸೋಮವಾರ ತಣ್ಣೀರು ಬಾವಿ ಬೀಚ್ ಗೆ ಬಂದಿದ್ದು, ಬಳಿಕ ದೈವಸ್ಥಾನ ಪ್ರಾಂಗಣದಲ್ಲಿ ನೈಲಾನ್ ಹಗ್ಗದಿಂದ ಕುತ್ತಿಗೆಗೆ ಬಿಗಿದು ಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಆತ್ಮಹತ್ಯೆಗೆ ನಿಖರ ಕಾರಣಗಳು ತಿಳಿದು ಬಂದಿಲ್ಲ. ಘಟನೆಗೆ ಸಂಬಂಧಿಸಿ ಪಣಂಬೂರು ಪೊಲೀಸರು ಸ್ಥಳ ಮಹಜರು ನಡೆಸಿ ಪ್ರಕರಣ ದಾಖಲಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News