×
Ad

ಪಣಂಬೂರು: ಅಂಬರ್ ಗ್ರೀಸ್ (ತಿಮಿಂಗಿಲ‌ವಾಂತಿ) ಹೊಂದಿದ್ದ ಮೂವರು ಆರೋಪಿಗಳ ಬಂಧನ

Update: 2023-09-11 22:24 IST

ಪಣಂಬೂರು: ಇಲ್ಲಿನ ಬೀಚ್ ನಲ್ಲಿ ಅಂಬರ್ ಗ್ರೀಸ್ ( ತಿಮಿಂಗಿಲ‌ವಾಂತಿ) ಹೊಂದಿದ್ದ ಮೂವರನ್ನು ಮಂಗಳೂರು ಸಿಸಿಬಿ ಪೊಲೀಸ್ ಸೋಮವಾರ ಬಂಧಿಸಿದ್ದಾರೆ.

ಬಂಧಿತರನ್ನು ಉಡುಪಿ ಜಿಲ್ಲೆ ಸಾಲಿಗ್ರಾಮ ಗ್ರಾಮದ ಜಯಕರ (39), ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆದಿತ್ಯ (25), ಹಾವೇರಿ ಜಿಲ್ಲೆಯ ಶಿಗ್ಗಾಂವ್ ತಾಲೂಕಿನ ಲೋಹಿತ್ ಕುಮಾರ್ ಗುರಪ್ಪನವರ್ (39) ಎಂದು ತಿಳಿದು ಬಂದಿದೆ. ಬಂಧಿತರಿಂದ 90 ಲಕ್ಷ ರೂ. ಮೌಲ್ಯದ 900ಗ್ರಾಂ ಅಂಬರ್ ಗ್ರೀಸ್ ( ತಿಮಿಂಗಿಲ ವಾಂತಿ) ನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಪಣಂಬೂರು ಬೀಚ್ ಬಳಿ ಮೂವರು ಅಂಬರ್ ಗ್ರೀಸ್ ( ತಿಮಿಂಗಿಲ ವಾಂತಿ) ಹೊಂದಿರುವ ಕುರಿತು ಖಚಿತ ಮಾಹಿತಿ ಆಧರಿಸಿ ದಾಳಿ ಮಾಡಿದ ಮಂಗಳೂರು ಸಿಸಿಬಿ ಪೊಲೀಸರು ಮೂವರು ಆರೋಪಿಗಳ ಸಹಿತ ಅಂಬರ್ ಗ್ರೀಸ್ ( ತಿಮಿಂಗಿಲ ವಾಂತಿ) ನ್ನು ವಶಕ್ಕೆ ಪಡೆದಿದ್ದಾರೆ.

ಆರೋಪಿಗಳ ಬಂಧನ ಕಾರ್ಯಾಚರಣೆಯನ್ನು ಮಂಗಳೂರು ನಗರ ಪೊಲೀಸ್ ಆಯುಕ್ತರಾದ ಅನುಪಮ್ ಅಗರ್ವಾಲ್ ಐಪಿಎಸ್ ಅವರ ಮಾರ್ಗದರ್ಶನದಲ್ಲಿ ಮಂಗಳೂರು ನಗರ ಅಪರಾಧ ವಿಭಾಗದ ಅಧಿಕಾರಿಗಳು ಮತ್ತು ಸಿಬ್ಬಂದಿ ಭಾಗವಹಿಸಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News