×
Ad

ಪಾವೂರು | ಅಕ್ರಮ ಮರಳುಗಾರಿಕೆ: ನಾಲ್ಕು ದೋಣಿಗಳು ವಶಕ್ಕೆ

Update: 2023-12-13 14:52 IST

ಉಳ್ಳಾಲ, ಡಿ.13: ಹರೇಕಳ ಪಾವೂರು ಬಳಿ ಅಕ್ರಮ ಮರಳುಗಾರಿಕೆ ನಡೆಸುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯನ್ನು ಆಧರಿಸಿ ಉಳ್ಳಾಲ ಠಾಣೆಯ ಇನ್ ಸ್ಪೆಕ್ಟರ್ ಬಾಲಕೃಷ್ಣ ನೇತೃತ್ವದ ಪೊಲೀಸರು ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳ ಸಹಯೋಗದಲ್ಲಿ ಇಂದು ಬೆಳಗ್ಗೆ ದಾಳಿ ನಡೆಸಿ ದೋಣಿಗಳನ್ನು ವಶಪಡಿಸಿಕೊಂಡಿದ್ದಾರೆ.

ಸಮೀಪದ ಮನೆಗಳಿಗೆ ನೇತ್ರಾವತಿ ನದಿಯಿಂದ ದೋಣಿಗಳ ಮೂಲಕ ಮರಳು ಸಂಗ್ರಹಿಸಿ ಸಾಗಾಟ ಮಾಡುತ್ತಿದ್ದರೆನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಕಾರ್ಯಾಚರಣೆ ನಡೆಸಿದ ಅಧಿಕಾರಿಗಳ ತಂಡ ಮರಳು ಸಹಿತ ನಾಲ್ಕು ದೋಣಿಗಳನ್ನು ವಶಪಡಿಸಿಕೊಂಡಿದೆ.

 

 

 

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News