×
Ad

ಬಕ್ರೀದ್ ಹಿನ್ನೆಲೆ: ಮಂಗಳೂರು ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಶಾಂತಿ ಸಭೆ

Update: 2023-06-27 15:02 IST

ಮಂಗಳೂರು, ಜೂ.27: ಬಕ್ರೀದ್ ಹಿನ್ನೆಲೆಯಲ್ಲಿ ಮಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಮಂಗಳವಾರ ದ.ಕ. ಜಿಲ್ಲಾ ಪೊಲೀಸ್ ಹಾಗೂ ಜಿಲ್ಲಾಡಳಿತದ ಆಶ್ರಯದಲ್ಲಿ ಶಾಂತಿ ಸಭೆ ನಡೆಯಿತು.

ಸಭೆಯಲ್ಲಿ ವಿವಿಧ ಧರ್ಮದ ಮುಖಂಡರು ಭಾಗವಹಿಸಿ ಸಲಹೆ ಸೂಚನೆ ನೀಡಿದರು. ಸಂಚಾರ ಸುವ್ಯವಸ್ಥೆ ಹಾಗೂ ಮಾದಕ ವಸ್ತುಗಳ ನಿಯಂತ್ರದ ಕುರಿತಂತೆಯೂ ಸಭೆಯಲ್ಲಿ ಅಭಿಪ್ರಾಯ ವ್ಯಕ್ತಪಡಿಸಿರುವ ಮುಖಂಡರು ಪೊಲೀಸ್ ಇಲಾಖೆಗೆ ಸಹಕಾರ ನೀಡುವ ಭರವಸೆ ನೀಡಿದ್ದಾರೆ ಎಂದು ಪೊಲೀಸ್ ಆಯುಕ್ತ ಕುಲದೀಪ್ ಆರ್. ಜೈನ್ ತಿಳಿಸಿದ್ದಾರೆ.

ಸಭೆಯಲ್ಲಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್, ಡಿಸಿಪಿಗಳಾದ ಅಂಶುಕುಮಾರ್, ದಿನೇಶ್ ಕುಮಾರ್ ಮೊದಲಾದವರು ಉಪಸ್ಥಿತರಿದ್ದರು.




 


Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News