ಪ್ರತಿಭಾ ಕಾರಂಜಿ: ಏಮಾಜೆಯ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಸಮಗ್ರ ದ್ವಿತೀಯ ಸ್ಥಾನ
Update: 2024-09-01 14:18 IST
ಬಂಟ್ವಾಳ : ಮಾಣಿ- ಬಾಳ್ತಿಲ ಕ್ಲಸ್ಟರ್ ಮಟ್ಟದ 2024-25 ನೇ ಸಾಲಿನ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ನೆಟ್ಲಮುಡ್ನೂರು ಗ್ರಾಮದ ಏಮಾಜೆಯ ದ.ಕ. ಜಿ.ಪಂ. ಕಿರಿಯ ಪ್ರಾಥಮಿಕ ಶಾಲೆಯು ಸಮಗ್ರ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದೆ.
ಬಾಳ್ತಿಲದ ದ.ಕ. ಜಿ.ಪಂ. ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಒಟ್ಟು 14 ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ, ಬಹುಮಾನಗಳಿಸಿದ್ದು ಈ ಪೈಕಿ 5 ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.