ಪ್ರವೀಣ್ ಜೋಷಿಗೆ ಪಿಹೆಚ್‌ಡಿ ಪದವಿ ಪ್ರದಾನ
ಮಂಗಳೂರು: ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾನಿಲಯ ಬೀದರ್ ಇದರ ಘಟಿಕೋತ್ಸವದಲ್ಲಿ ಮಂಗಳೂರಿನ ಮೀನುಗಾರಿಕಾ ಮಹಾವಿದ್ಯಾಲಯದ ಜಲ ಪರಿಸರ ನಿರ್ವಹಣೆ ವಿಭಾಗದಲ್ಲಿ ಕರ್ತವ್ಯದಲ್ಲಿರುವ ಪ್ರವೀಣ್ ಜೋಷಿ ಎಚ್.ಎಸ್. ಅವರಿಗೆ ಪಿಹೆಚ್‌ಡಿ ಪದವಿ ಪ್ರದಾನ ಮಾಡಲಾಗಿದೆ.
ಪ್ರೊ. ಡಾ.ಎ.ಟಿ. ರಾಮಚಂದ್ರ ನಾಯ್ಕ ಅವರ ಮಾರ್ಗದರ್ಶನದಲ್ಲಿ ‘ವಿವಿಧ ಜಲಕೃಷಿ ವ್ಯವಸ್ಥೆಗಳಲ್ಲಿ ಉತ್ಪಾದಕತೆ ಮತ್ತು C/N ಅನುಪಾತದ ಮೌಲ್ಯಮಾಪನ’ ಎಂಬ ಮಹಾಪ್ರಬಂಧ ಮಂಡಿಸಿದ್ದರು.
ಕರ್ನಾಟಕದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಡಾಕ್ಟರೇಟ್ ಪದವಿ ಪ್ರದಾನ ಮಾಡಿದರು. ಈ ಸಂದರ್ಭ ಪಶು ಸಂಗೋಪನೆ ಸಚಿವ ಕೆ. ವೆಂಕಟೇಶ್, ಭಾರತೀಯ ಕೃಷಿ ಅನುಸಂಧಾನ ಪರಿಷತ್ತಿನ ಸಹಾಯಕ ವ್ಯವಸ್ಥಾಪಕ ನಿರ್ದೇಶಕ ಡಾ.ಅಗರ್ವಾಲ್, ವಿಶ್ವವಿದ್ಯಾಲಯದ ಕುಲಪತಿ ಡಾ. ಕೆ.ಸಿ. ವೀರಣ್ಣ ಉಪಸ್ಥಿತರಿದ್ದರು.
ಚಾಮರಾಜನಗರ ಜಿಲ್ಲೆಯ ಹೆಗ್ಗವಾಡಿ ಗ್ರಾಮದ ದಿ. ಸಿದ್ದರಾಜು ಎಸ್- ವಿಜಯಾ ದಂಪತಿಯ ಪುತ್ರನಾಗಿರುವ ಪ್ರವೀಣ್ ಜೋಷಿ ಎಚ್.ಎಸ್. ಇವರು ಮೈಸೂರು ಜಿಲ್ಲೆಯ ಟಿ. ನರಸೀಪುರ ತಾಲೂಕಿನ ವಿದ್ಯೋದಯ ಶಾಲೆಯ ಹಳೆಯ ವಿದ್ಯಾರ್ಥಿಯಾಗಿದ್ದಾರೆ.