ಮಂಗಳೂರು ಕಂಬಳ ಸಮಿತಿಯ ಪೂರ್ವಭಾವಿ ಸಭೆ
ಮಂಗಳೂರು: ಕ್ಯಾಪ್ಟನ್ ಬೃಜೇಶ್ ಚೌಟ ನೇತೃತ್ವದಲ್ಲಿ 7ನೇ ವರ್ಷದ ಮಂಗಳೂರು ಕಂಬಳವು ಡಿ.30ರಂದು ಕೂಳೂರಿನ ಗೋಲ್ಡ್ ಫಿಂಚ್ ಸಿಟಿಯ ರಾಮ ಲಕ್ಷ್ಮಣ ಜೋಡು ಕರೆಯಲ್ಲಿ ನಡೆಯಲಿರುವ ಹಿನ್ನೆಲೆಯಲ್ಲಿ ಪೂರ್ವಭಾವಿ ಸಭೆಯು ಶುಕ್ರವಾರ ನಗರದ ಪತ್ತುಮುಡಿ ಸೌಧದಲ್ಲಿ ನಡೆಯಿತು.
ಮಂಗಳೂರು ಕಂಬಳ ಸಮಿತಿಯ ಗೌರವ ಸಲಹೆಗಾರ ಪ್ರಸಾದ್ ಕುಮಾರ್ ಶೆಟ್ಟಿ ಸಭೆಯನ್ನು ಉದ್ಘಾಟಿಸಿದರು. ಈ ಸಂದರ್ಭ ಮಾತನಾಡಿದ ಮಂಗಳೂರು ಕಂಬಳ ಸಮಿತಿ ಅಧ್ಯಕ್ಷ ಕ್ಯಾಪ್ಟನ್ ಬೃಜೇಶ್ ಚೌಟ ‘ಕಂಬಳವನ್ನು ಮುಂದಿನ ತಲೆಮಾರುಗಳಿಗೆ ಉಳಿಸುವ ಸಲುವಾಗಿ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯೋನ್ಮುಖರಾಗಬೇಕು ಎಂದು ಕರೆ ನೀಡಿ ದರಲ್ಲದೆ ಕಂಬಳಕ್ಕೆ ಹೊಸ ಮೆರುಗನ್ನು ನೀಡುವ ದೃಷ್ಟಿಯಿಂದ ಕರಾವಳಿಯ ಸಂಸ್ಕೃತಿಯನ್ನು ಸಾರುವ ಕಾರ್ಯಕ್ರಮ ಗಳನ್ನು ಹಮ್ಮಿಕೊಳ್ಳಲಾಗುವುದು ಎಂದರು.
ಜಿಲ್ಲಾ ಕಂಬಳ ಸಮಿತಿಯ ಪ್ರಧಾನ ಕಾರ್ಯದರ್ಶಿ ಮುಚ್ಚೂರು ಕಲ್ಕುಡ ಲೋಕೇಶ್ ಕುಮಾರ್ ಮಾತನಾಡಿದರು. ಈ ಸಂದರ್ಭ ದ.ಕ.ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮಂಗಳೂರು ಕಂಬಳ ಸಮಿತಿಯ ಕಾರ್ಯದರ್ಶಿ ಮನ್ಮತ್ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು.
ಸಭೆಯಲ್ಲಿ ಜಿಲ್ಲಾ ಕಂಬಳ ಸಮಿತಿಯ ಪಿ.ಆರ್. ಶೆಟ್ಟಿ, ವಿಜಯಕುಮಾರ್ ಕಂಗಿನಮನೆ, ಕಾರ್ಪೊರೇಟರ್ ಅನಿಲ್ ಕುಮಾರ್, ಮಂಗಳೂರು ಕಂಬಳ ಸಮಿತಿಯ ಪ್ರಧಾನ ಕಾರ್ಯದರ್ಶಿ ಸುಜಿತ್ ಪ್ರತಾಪ್ ಮಂಗಲ್ಪಾಡಿ, ಕಂಬಳ ಸಮಿತಿಯ ಕೋಶಾಧಿಕಾರಿ ಪ್ರೀತಮ್ ರೈ ಉಪಸ್ಥಿತರಿದ್ದರು.
ಸಂಚಾಲಕ ಸಚಿನ್ ಶೆಟ್ಟಿ ಸಾಂತ್ಯ ಸ್ವಾಗತಿಸಿದರು. ಉಪಾಧ್ಯಕ್ಷ ಪ್ರಕಾಶ್ ಪೂಜಾರಿ ಗರೋಡಿ ವಂದಿಸಿದರು. ಉಪಾಧ್ಯಕ್ಷ ಈಶ್ವರ್ ಪ್ರಸಾದ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.