ಮಂಗಳೂರು ದಕ್ಷಿಣ ವಲಯ ತಾಲೂಕು ಮಟ್ಟದ ಪ್ರಾಥಮಿಕ , ಪೌಢ ಶಾಲಾ ಬಾಲಕ-ಬಾಲಕಿಯರ ಕ್ರೀಡಾಕೂಟ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಾಗೂ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮಂಗಳೂರು ದಕ್ಷಿಣ ವಲಯ ಮತ್ತು ನಿತ್ಯಾಧರ್ ಆಂಗ್ಲ ಮಾಧ್ಯಮ ಶಾಲೆ ಪೆರ್ಮನ್ನೂರು ಸಂಯುಕ್ತ ಆಶ್ರಯದಲ್ಲಿ ಮಂಗಳೂರು ದಕ್ಷಿಣ ವಲಯ ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪೌಢ ಶಾಲಾ ಬಾಲಕ-ಬಾಲಕಿಯರ ಕ್ರೀಡಾಕೂಟ 2025-26 ಮಂಗಳೂರು ಮಂಗಳಾ ಕ್ರೀಡಾಂಗಣದಲ್ಲಿ ಮಂಗಳವಾರ ನಡೆಯಿತು.
ನಿತ್ಯಾಧರ್ ಆಂಗ್ಲ ಮಾಧ್ಯಮ ಶಾಲೆಯ ಸಂಚಾಲಕ ವಂದನೀಯ ಫಾದರ್ ಆಂಟೋನಿ ಲಸ್ರಾದೊ ಕ್ರೀಡಾಕೂಟವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಕ್ರೀಡೆ ಎಂಬುದು ಸೋಲು ಗೆಲುವಿನ ವಿಷಯವಲ್ಲ, ಶಿಸ್ತಿನ ಸಹಕಾರದ ದೃಢ ನಿಶ್ಚಲವಾದ ಪಾಠವನ್ನು ಕಲಿಸುವ ಪಾಠ ಶಾಲೆಯಾಗಿದೆ ಎಂದರು.
ಮಂಗಳೂರು ದಕ್ಷಿಣ ವಲಯದ ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿ ಡಾ. ಪ್ರಶಾಂತ್ ಕುಮಾರ್ ಕೆ.ಎಸ್ ಮಾತನಾಡಿ ಮಕ್ಕಳಿಗೆ ಪರರ ಯಶಸ್ಸಿನಲ್ಲಿ ಸಂತೋಷಪಡುವುದನ್ನು ಮತ್ತು ಸೋಲನ್ನು ಸಮಾನವಾಗಿ ಸ್ವೀಕರಿಸುವುದನ್ನು ನಾವು ಕಲಿಸಬೇಕು, ಸೋಲು ಗೆಲುವು ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ ಎಂದು ಅಭಿಪ್ರಾಯಪಟ್ಟರು.
ಮಂಗಳೂರು ದಕ್ಷಿಣವಲಯ ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಲಿಲ್ಲಿ ಪಾಯಸ್ ಪ್ರಾಸ್ತವಿಕವಾಗಿ ಮಾತನಾಡಿದರು.
ಮಂಗಳೂರು ದಕ್ಷಿಣ ವಲಯ ಪ್ರಭಾರ ಕ್ಷೇತ್ರ ಸಮನ್ವಯ ಅಧಿಕಾರಿ ಸುಷ್ಮಾ ಕಿಣಿ, ನಿತ್ಯಾಧರ್ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪದ್ಯಾಯಿನಿ ಭಗಿನಿ ಪ್ರಮೀಳಾ ರೋಡ್ರಿಗಸ್, ಕರ್ನಾಟಕ ರಾಜ್ಯ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ತ್ಯಾಗಂ ಹರೇಕಳ, ಮಂಗಳೂರು ದಕ್ಷಿಣ ವಲಯ ದೈಹಿಕ ಶಿಕ್ಷಣ ಶಿಕ್ಷಕ ಸಂಘದ ಅಧ್ಯಕ್ಷ ಶೇಖರ್ ಕಡ್ತಳ, ಉಳ್ಳಾಲ ವಲಯ ಪ್ರೌಢ ಶಾಲಾ ವಿಭಾಗದ ನೋಡೆಲ್ ಅಧಿಕಾರಿ ರಾಜೀವ ನಾಯಕ್, ದೈಹಿಕ ಶಿಕ್ಷಣ ಶಿಕ್ಷಕಿ ನಯನ ಕೆ, ಶಾಲಾ ಆಡಳಿತ ಮಂಡಳಿಯ ಜಾನ್ ಮೊಂತೆರೊ ಮತ್ತು ಅರುಣ್ ಡಿ ಸೋಜ, ಶಿಕ್ಷಕ ರಕ್ಷಕ ಸಂಘದ ಕಾರ್ಯದರ್ಶಿ ಜೀವನ್ ಫೆರಾವೋ, , ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಪದಾಧಿಕಾರಿಗಳು, ನಿತ್ಯಾಧರ್ ಆಂಗ್ಲಮಾಧ್ಯಮ ಶಾಲೆಯ ಆಡಳಿತ ಮಂಡಳಿ, ಶಿಕ್ಷಕ ರಕ್ಷಕ ಸಂಘ, ಹಳೆ ವಿದ್ಯಾರ್ಥಿ ಸಂಘ, ಶಿಕ್ಷಕ ಹಾಗೂ ಶಿಕ್ಷಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಶಾಲಾ ವಿದ್ಯಾರ್ಥಿಗಳು ಪ್ರಾರ್ಥನೆ ಗೀತೆ ಹೇಳಿದರು, ಶಿಕ್ಷಕಿಯರು ನಾಡಗೀತೆ ಹೇಳಿದರು, ಶಿಕ್ಷಕಿ ರಿಯಾನಾ ಸ್ವಾಗತಿಸಿದರು, ಮಂಗಳೂರು ದಕ್ಷಿಣ ವಲಯದ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ಮೋಹನ್ ಶಿರ್ಲಾಲ್ ಮತ್ತು ಶಿಕ್ಷಕಿ ಸುಜಾತ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು, ವಿದ್ಯಾರ್ಥಿ ಅಭಿಯಾನ್ ಕ್ರೀಡಾ ಪ್ರತಿಜ್ಞೆ ಮಾಡಿದರು, ಶಿಕ್ಷಕಿ ರೀನಾ ವಂದಿಸಿದರು.