ಮಂಗಳೂರಿನಿಂದ ಪ್ರಧಾನಿ ನಿರ್ಗಮನ
Update: 2025-11-28 15:16 IST
ಮಂಗಳೂರು, ನ.28: ಉಡುಪಿ: ಪರ್ಯಾಯ ಪುತ್ತಿಗೆ ಮಠದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸಿದ್ದ ಪ್ರಧಾನಿ ನರೇಂದ್ರ ಮೋದಿಯವರು ಮಧ್ಯಾಹ್ನ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಗೋವಾಗೆ ತೆರಳಿದರು.
ಉಡುಪಿಯಲ್ಲಿ ಕಾರ್ಯಕ್ರಮ ಮುಗಿಸಿ ಹೆಲಿಕಾಪ್ಟರ್ ನಲ್ಲಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಧಾನಿ, ಬಳಿಕ ವಾಯುಪಡೆ ವಿಮಾನದಲ್ಲಿ ಗೋವಾಗೆ ತೆರಳಿದರು.
ವಿಮಾನ ನಿಲ್ದಾಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ, ಜಿಲ್ಲಾಧಿಕಾರಿ ಎಚ್.ವಿ.ದರ್ಶನ್ ಮತ್ತಿತರರು ಉಪಸ್ಥಿತರಿದ್ದು, ಪ್ರಧಾನಿಯನ್ನು ಬೀಳ್ಕೊಟ್ಟರು.