ದಕ್ಷಿಣ ಕನ್ನಡ ಜಿಲ್ಲೆಯ ಐದು ತಾಲೂಕುಗಳಲ್ಲಿ ಮೂರು ದಿನ ನಿಷೇಧಾಜ್ಞೆ ಜಾರಿ
Update: 2025-05-27 21:09 IST
ಮಂಗಳೂರು: ಬಂಟ್ವಾಳದ ಕೊಳತ್ತಮಜಲು ಬಳಿ ನಡೆದ ಅಬ್ದುಲ್ ರಹಿಮಾನ್ ಎಂಬ ಯುವಕನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ದ.ಕ. ಜಿಲ್ಲೆಯ ಐದು ತಾಲೂಕು ವ್ಯಾಪ್ತಿಯಲ್ಲಿ ಸೆಕ್ಷನ್ 163ರಂತೆ ಮೂರು ದಿನ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಬೆಳ್ತಂಗಡಿ, ಕಡಬ, ಪುತ್ತೂರು ಮತ್ತು ಸುಳ್ಯ ತಾಲೂಕುಗಳಲ್ಲಿ ಮೇ 27ರ ಸಂಜೆ 6 ಗಂಟೆಯಿಂದ ಮೇ 30ರ ಸಂಜೆ 6ರವರೆಗೆ ನಿಷೇಧಾಜ್ಞೆ ಜಾರಿ ಮಾಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.