×
Ad

ಮಂಗಳೂರು: ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಮೇ 30ರ ತನಕ ನಿಷೇಧಾಜ್ಞೆ ಜಾರಿ

Update: 2025-05-27 22:18 IST

ಮಂಗಳೂರು: ಬಂಟ್ವಾಳ ತಾಲೂಕಿನ ಕೊಳ್ತಮಜಲು ಸಮೀಪ ಅಬ್ದುಲ್ ರಹೀಮಾನ್ ಯಾನೆ ರಹೀಮ್ ಎಂಬವರನ್ನು ದುಷ್ಕರ್ಮಿಗಳು ಮಾರಕಾಯುಧಗಳಿಂದ ತೀವ್ರ ಹಲ್ಲೆ ನಡೆಸಿ ಕೊಲೆಗೈದ ಹಿನ್ನೆಲೆಯಲ್ಲಿ ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಸಾರ್ವಜನಿಕ ಶಾಂತಿ ಸುವ್ಯವಸ್ಥೆಗೆ ಧಕ್ಕೆ ಬರುವಂತಹ ಯಾವುದೇ ಘಟನೆ ನಡೆಯದಂತೆ ತಡೆಗಟ್ಟುವ ಉದ್ದೇಶಕ್ಕಾಗಿ ಮೇ 27 ಸಂಜೆ 6 ಗಂಟೆಯಿಂದ ಮೇ 30 ಸಂಜೆ 6 ಗಂಟೆ ತನಕ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ನಿಷೇದಾಜ್ಞೆಯನ್ನು ಜಾರಿಗೊಳಿಸಲಾಗಿದೆ.

ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಪರಿಸ್ಥಿತಿಯು ಬೂದಿ ಮುಚ್ಚಿದ ಕೆಂಡದಂತಿದ್ದು, ಪ್ರಕ್ಷುಬ್ಧ ವಾತಾವರಣ ಉಂಟಾಗಿ ಸಾರ್ವಜನಿಕ ಶಾಂತಿ ಮತ್ತು ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವ ಸಾಧ್ಯತೆಗಳು ಹೆಚ್ಚಾಗಿರುವ ಹಿನ್ನೆಲೆಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತರುಹಾಗೂ ಹೆಚ್ಚುವರಿ ಜಿಲ್ಲಾ ದಂಡಾಧಿಕಾರಿ ಅನುಪಮ್ ಅಗ್ರವಾಲ್ ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News