×
Ad

ಮಂಗಳೂರು: ಮಣಿಪುರದಲ್ಲಿ ಕ್ರೈಸ್ತರ ಮೇಲಿನ ದಾಳಿ ಖಂಡಿಸಿ ಪ್ರತಿಭಟನೆ

Update: 2023-07-01 13:38 IST

ಮಂಗಳೂರು, ಜು.1: ಮಣಿಪುರ ರಾಜ್ಯದಲ್ಲಿ ಸುಮಾರು 2 ತಿಂಗಳಿನಿಂದ ಕ್ರೈಸ್ತರ ಮೇಲೆ ನಿರಂತರ ನಡೆಯುತ್ತಿರುವ ದಾಳಿಯನ್ನು ಖಂಡಿಸಿ ಕರ್ನಾಟಕ ಸೀರೋ ಮಲಬಾರ್ ಕೆಥೊಲಿಕ್ ಅಸೋಸಿಯೇಶನ್ ನೇತೃತ್ವದಲ್ಲಿ ಶನಿವಾರ ಮಂಗಳೂರಿನ ಮಿನಿ ವಿಧಾನ ಸೌಧದ ಬಳಿ ಪ್ರತಿಭಟನೆ ನಡೆಯಿತು.

ಮಣಿಪುರ ಹಿಂಸಾಚಾರವನ್ನು ತಡೆಗಟ್ಟಲು ಕೇಂದ್ರ ಸರಕಾರ ತಕ್ಷಣ ಕ್ರಮ ಕೈಗೊಳ್ಳಬೇಕು, ಪ್ರಧಾನಿಯವರು ಮಣಿಪುರಕ್ಕೆ ಭೇಟಿ ನೀಡಿ ಶಾಂತಿ ಸುವ್ಯವಸ್ಥೆ ನೆಲೆಸಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಮಾಜಿ ಶಾಸಕ ಜೆ.ಆರ್.ಲೋಬೋ, ಕರ್ನಾಟಕ ಸೀರೋ ಮಲಬಾರ್ ಕೆಥೊಲಿಕ್ ಅಸೋಸಿಯೇಶನ್ ಕೇಂದ್ರೀಯ ನಿರ್ದೇಶಕ ಫಾಣ ಶಾಜಿ ವಿ.ಜೆ., ಅಧ್ಯಕ್ಷ ಬೆಟ್ಟಿ ನೆಡುನಿಲಮ್, ಕಾರ್ಯದರ್ಶಿ ಸೆಬಾಸ್ಟಿಯನ್ ಎಂ.ಜೆ., ಖಜಾಂಚಿ ಜಿಮ್ಸನ್, ಕರ್ನಾಟಕ ಸೀರೋ ಮಲಬಾರ್ ಕೆಥೊಲಿಕ್ ಅಸೋಸಿಯೇಶನ್ ಜಾಗತಿಕ ಸಮಿತಿ ಕಾರ್ಯದರ್ಶಿ ಬೆನ್ನಿ ಆ್ಯಂಟನಿ, ಆಲ್ ಇಂಡಿಯಾ ಕೆಥೊಲಿಕ್ ಯೂನಿಯನ್ ರಾಜ್ಯಾಧ್ಯಕ್ಷ ಕ್ಸೇವಿಯರ್ ಪಾಲೇಲಿ, ಪ್ರ. ಕಾರ್ಯದರ್ಶಿ ಆ್ಯಂಟನಿ ವಿಲ್ಸನ್, ಕರ್ನಾಟಕ ಸೀರೋ ಮಲಬಾರ್ ಕೆಥೊಲಿಕ್ ಅಸೋಸಿಯೇಶನ್ ಮಾಜಿ ಅಧ್ಯಕ್ಷ ಸೆಬಾಸ್ಟಿಯನ್ ಕೆ.ಕೆ., ಸೆಬಾಸ್ಟಿಯನ್ ಪಿ.ಪಿ. ಮಾಧ್ಯಮ ಸಂಯೋಜನಕ ಎಲಿಯಾಸ್ ಫೆರ್ನಾಂಡಿಸ್, ಬೆಳ್ತಂಗಡಿ ಧರ್ಮಪ್ರಾಂತ್ಯದ ವಿವಿಧ ಧರ್ಮಗುರುಗಳು, ಧರ್ಮ ಭಗಿನಿಯರು, ಪ್ರಾದೇಶಿಕ ಘಟಕಗಳ ಪದಾಧಿಕಾರಿಗಳು ಭಾಗವಹಿಸಿದ್ದರು.

ಪ್ರತಿಭಟನೆಯ ಬಳಿಕ ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಲಾಯಿತು.

 

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News