ಮೇ 13ರಂದು ಉಡುಪಿಯಲ್ಲಿ ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಪ್ರತಿಭಟನೆ
Update: 2025-05-06 14:38 IST
ಉಡುಪಿ, ಮೇ 6: ವಕ್ಫ್ ತಿದ್ದುಪಡಿ ಕಾಯ್ದೆ 2025ರ ವಿರುದ್ಧ ಉಡುಪಿ ಜಿಲ್ಲಾ ವಕ್ಫ್ ಉಳಿಸಿ -ಸಂವಿಧಾನ ರಕ್ಷಿಸಿ ಹೋರಾಟ ಸಮಿತಿಯ ವತಿಯಿಂದ ಸಹಾಬಾಳ್ವೆ ಉಡುಪಿ ಸಹಕಾರದೊಂದಿಗೆ ಮೇ 13ರಂದು ಸಂಜೆ 4 ಗಂಟೆಗೆ ಉಡುಪಿ ಮಿಷನ್ ಕಾಂಪೌಂಡ್ ಮೈದಾನದಲ್ಲಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ.
ಈ ಪ್ರತಿಭಟನೆಯಲ್ಲಿ ರಾಷ್ಟ್ರ ಹಾಗೂ ರಾಜ್ಯ ಮಟ್ಟದ ಮುಂಚೂಣಿ ಹೋರಾಟಗಾರರು ಭಾಗವಹಿಸಲಿರುವರು ಎಂದು ಹೋರಾಟ ಸಮಿತಿಯ ಜಿಲ್ಲಾ ಪ್ರಧಾನ ಸಂಚಾಲಕ ಕೆ.ಎ.ಅಬ್ದುರ್ರಹ್ಮಾನ್ ರಝ್ವಿ ಕಲ್ಕಟ್ಟ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.