×
Ad

ವಕ್ಫ್ ಕಾಯ್ದೆಗೆ ತಿದ್ದುಪಡಿ ವಿರೋಧಿಸಿ ಕಕ್ಕಿಂಜೆಯಲ್ಲಿ ಪ್ರತಿಭಟನೆ

Update: 2025-03-04 18:25 IST

ಬೆಳ್ತಂಗಡಿ: ಕೇಂದ್ರ ಸರಕಾರ ಉದ್ಧೇಶಿರುವ ವಕ್ಫ್ ಕಾಯ್ದೆಗೆ ತಿದ್ದುಪಡಿ ಪ್ರಕ್ರಿಯೆಯನ್ನು ವಿರೋಧಿಸಿ ಮುಂಡಾಜೆ, ಚಾರ್ಮಾಡಿ, ನೆರಿಯ ಗ್ರಾ.ಪಂ ವ್ಯಾಪ್ತಿಯ ಎಲ್ಲಾ ಮಸ್ಜಿದ್‌ ಮತ್ತು ಮೊಹಲ್ಲಾಗಳ ಒಗ್ಗೂಡುವಿಕೆಯೊಂದಿಗೆ ಪ್ರತಿಭಟನಾ ಸಭೆಯು ಕಕ್ಕಿಂಜೆ ಪೇಟೆಯಲ್ಲಿ ಜರುಗಿತು.

ಇಲ್ಲಿನ‌ ಹಾರಿಸ್ ಹೊಟೇಲ್ ಬಳಿ‌ ಜಮಾಯಿಸಿದ ಪ್ರತಿಭಟನಾಗಾರರು ಸಾರ್ವಜನಿಕ ಸಭೆ ನಡೆಸಿ ಕೇಂದ್ರ ಸರಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

ಇಸ್ಲಾಂ ನಲ್ಲಿ ವಕ್ಫ್ ಎಂದರೆ ಏನು? ವಕ್ಫ್ ಕಾಯ್ದೆಯ ತಿದ್ದುಪಡಿ ಹೇಗೇಗೆ ಆಯ್ತು, ಜಂಟಿ ಸದನ‌ಸಮಿತಿ ನಡೆದುಕೊಂಡ ರೀತಿಯ ಬಗ್ಗೆ ಹಿರಿಯ ಪತ್ರಕರ್ತ ಅಶ್ರಫ್ ಆಲಿಕುಂಞಿ ಮುಂಡಾಜೆ ವಿವರಿಸಿದರು. ಕಾಯ್ದೆಯ ತಿದ್ದುಪಡಿಯ ಲೋಪಗಳೇನೇನು? ಕಾಯ್ದೆ ಬದಲಾವಣೆಯಲ್ಲಿ ಒಳಗೊಂಡಿರುವ ಅಸಂವಿಧಾನಿಕ ಅಂಶಗಳು ಏನೇನು? ಹಾಗೂ ಬದಲಾಗಲಿರುವ ಕಾಯ್ದೆಯಿಂದ ಆಗುವ ತೊಂದರೆಗಳು ಏನು ಎಂಬ ಬಗ್ಗೆ ಯುವ ನ್ಯಾಯವಾದಿ ನವಾಝ್ ಶರೀಫ್ ಅರೆಕ್ಕಲ್ ಮಾತನಾಡಿದರು.

ಸಾಮಾಜಿಕ ಕಾರ್ಯಕರ್ತ ಅಶ್ರಫ್ ಚಾರ್ಮಾಡಿ, ಆರು ಜಮಾಅತ್ ಗಳ ಪದಾಧಿಕಾರಿಗಳು, ಧರ್ಮಗುರುಗಳು, ವಿವಿಧ ಸಂಘಟನೆಗಳ ಪ್ರಮುಖರು ಭಾಗವಹಿಸಿದ್ದರು.

ಬಳಿಕ ಕಕ್ಕಿಂಜೆ ಪೇಟೆಯ ಮೂಲಕ ಗ್ರಾ.ಪಂ ಕಚೇರಿ ವರೆಗೆ ಜಾಥಾ ನಡೆಸಲಾಯಿತು. ಅಲ್ಲಿ ರಾಷ್ಟ್ರಪತಿ ಗಳಿಗೆ ಗ್ರಾ.ಪಂ ಪಿಡಿಒ‌ ಮೂಲಕ ಮನವಿ ಸಲ್ಲಿಸಲಾಯಿತು. ಅಬ್ದುಲ್ ನಾಸಿರ್ ಕಲ್ಲಗುಡ್ಡೆ ವಂದಿಸಿದರು.

ಕಬೀರ್ ಅರೆಕ್ಕಲ್ ನಿರೂಪಿಸಿದರು. ನಝೀರ್ , ಶರೀಫ್ ಹೆಚ್ ಎ, ಹನೀಫ್ ಕೋಣೆ ಮೊದಲಾದವರು ನಾಯಕತ್ವ ವಹಿಸಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News