×
Ad

ನ.3: ಮಂಗಳೂರು ಜಂಕ್ಷನ್ ರೈಲ್ವೆ ನಿಲ್ದಾಣದ ಮುಂದೆ ಪ್ರತಿಭಟನೆ

Update: 2023-11-02 19:44 IST

ಮಂಗಳೂರು : ದೇಶದ ಆರ್ಥಿಕತೆಯ ಜೀವಾಳ ಹಾಗೂ ಜನರ ಜೀವನಾಡಿಯಾದ ರೈಲ್ವೆಗಳನ್ನು ಖಾಸಗೀಕರಣ ಮಾಡುವುದರ ವಿರುದ್ಧ ನ.3ರಂದು ಪೂ.11ಕ್ಕೆ ಮಂಗಳೂರು ರೈಲ್ವೆ ಜಂಕ್ಷನ್‌ನ ಮುಂದೆ ಪ್ರತಿಭಟನೆ ನಡೆಯಲಿದೆ.

ದ.ಕ.ಜಿಲ್ಲಾ ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ವೇದಿಕೆ ಮತ್ತು ವಿವಿಧ ರೈತ ಸಂಘಟನೆಗಳ ಒಕ್ಕೂಟ, ವಿದ್ಯಾರ್ಥಿ ಯುವಜನ ಮಹಿಳಾ ದಲಿತ ಆದಿವಾಸಿ ಹಾಗೂ ಜನಪರ ಸಂಘಟನೆಗಳ ವೇದಿಕೆಯ ಸಂಯುಕ್ತ ಆಶ್ರಯದಲ್ಲಿ ಪ್ರತಿಭಟನೆ ನಡೆಯಲಿದೆ ಎಂದು ಪ್ರಕಟನೆ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News