×
Ad

ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್‌: ದೂರು ದಾಖಲು

Update: 2025-06-06 09:39 IST

ಪುತ್ತೂರು: ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್‌ ಹಾಕಿ ಪ್ರಸಾರ ಮಾಡಿದ ಆರೋಪದಲ್ಲಿ ವ್ಯಕ್ತಿಯೋರ್ವನ ವಿರುದ್ದ ಪ್ರಕರಣ ದಾಖಲಿಸಲಾಗಿದೆ.

ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ ಅಡೂರ್ ಎಂಬಲ್ಲಿನ ನಿವಾಸಿ ಸತ್ಯನಾರಾಯಣ ಅಡಿಗ ಎಂಬಾತನ ವಿರುದ್ದ ಪ್ರಕರಣ ದಾಖಲಾಗಿದೆ.

ಈತ ತನ್ನ ವಾಟ್ಸ್ ಆ್ಯಪ್ ಮೂಲಕ ಪ್ರಚೋದನಕಾರಿ ಪೋಸ್ಟ್ ಗಳನ್ನು ಪ್ರಸಾರ ಮಾಡಿದ್ದು, ಈತನ ಬರಹಗಳಿಂದ ಸಾರ್ವಜನಿಕ ನೆಮ್ಮದಿಗೆ ಭಂಗ ತರುವಂತಹ ಹಾಗೂ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವ ಸಾಧ್ಯತೆಗಳಿರುವ ಆರೋಪದಲ್ಲಿ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಗುರುವಾರ ಅ ಕ್ರ :42/2025 ಕಲಂ: 353(2),196(1) (a) BNS 2023 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News