×
Ad

ಪುತ್ತೂರು: ಮಾದಕವಸ್ತು ಮಾರಾಟ ಯತ್ನ; ಆರೋಪಿ ಬಂಧನ

Update: 2025-11-20 12:20 IST

ಪುತ್ತೂರು: ನಿಷೇಧಿತ ಎಂಡಿಎಂಎ ವಸ್ತುವನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ ಘಟನೆ ನಗರದ ಕೆಮ್ಮಿಂಜೆ ಗ್ರಾಮದ ಮುಕ್ರಂಪಾಡಿಯಲ್ಲಿ ನಡೆದಿದೆ.

ಕಬಕ ನಿವಾಸಿ ಮಹಮ್ಮದ್ ಮುಸ್ತಫ (36) ಬಂಧಿತ ಆರೋಪಿ. ಈತ ಕೆಮ್ಮಿಂಜೆ ಗ್ರಾಮದ ಮುಕ್ರಂಪಾಡಿ ಕಮ್ಮಾಡಿ ಮರದ ಮಿಲ್ ಬಳಿ ಬಾಡಿಗೆ ಮನೆಯಲ್ಲಿ ವಾಸ್ತವ್ಯವಿದ್ದ ಎಂದು ತಿಳಿದು ಬಂದಿದೆ.

ಅಕ್ರಮವಾಗಿ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿರುವ ಬಗ್ಗೆ ಮಾಹಿತಿ ಬಂದ ಮೇರೆಗೆ ಪುತ್ತೂರು ನಗರ ಠಾಣೆಯ ಪೊಲೀಸ್‌ ಉಪನಿರೀಕ್ಷಕ ಜನಾರ್ದನ ಕೆ.ಎಂ. ಅವರು ಸಿಬ್ಬಂದಿ ಜತೆ ಸ್ಥಳಕ್ಕೆ ತೆರಳಿ ಪರೀಶಿಲಿಸಿದಾಗ, ಬಾಡಿಗೆ ಕೋಣೆಯಲ್ಲಿ ಆರೋಪಿಯು ಅಕ್ರಮವಾಗಿ 14 ಗ್ರಾಂ ನಿಷೇದಿತ ಮಾದಕ ಎಂಡಿಎಂಎ ವಸ್ತುವನ್ನು ತನ್ನ ಬಳಿ ಇಟ್ಟುಕೊಂಡು ಮಾರಾಟ ಮಾಡುತ್ತಿರುವುದು ಕಂಡು ಬಂದಿದೆ.

ಈ ಬಗ್ಗೆ ಆರೋಪಿ ವಿರುದ್ದ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ  ಅ.ಕ್ರ: 109/2025 ಕಲಂ;- 8(C),22(b) NDPS ಕಾಯ್ದೆಯಂತೆ ಪ್ರಕರಣ ದಾಖಲಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News