×
Ad

ಪುತ್ತೂರು: ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ

Update: 2024-01-07 18:54 IST

ಪುತ್ತೂರು: ಕಾಲೇಜು ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರು ತಾಲೂಕಿನ ಸುಳ್ಯಪದವಿನ ಕನ್ನಡ್ಕದಲ್ಲಿ ನಡೆದಿದೆ.

ಪಡುವನ್ನೂರು ಗ್ರಾಮದ ಕನ್ನಡ್ಕ ಕಜೆಮೂಲೆ ನಿವಾಸಿ ಚಂದ್ರಶೇಖರ್ ಗೌಡ ಎಂಬವರ ಪುತ್ರಿ ದೀಕ್ಷಾ (16 ) ಆತ್ಮಹತ್ಯೆ ಮಾಡಿಕೊಂಡವರು. ಅವರು ರವಿವಾರ ಬೆಳಗ್ಗೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮನೆಯಲ್ಲಿದ್ದ ತಂದೆ-ತಾಯಿ ಕೃಷಿ ಕೆಲಸದಲ್ಲಿ ತೊಡಗಿಸಿಕೊಂಡ ಸಂದರ್ಭದಲ್ಲಿ ಮನೆಯಲ್ಲಿ ಒಬ್ಬಳೇ ಇದ್ದಳು. ಮನೆಯ ರೂಮಲ್ಲಿ ಫ್ಯಾನ್ ಗೆ ನೇಣು ಹಾಕಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಿಳಿದು ಬಂದಿದೆ.

ದೀಕ್ಷಾ ಪುತ್ತೂರು ಖಾಸಗಿ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದಳು. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ.


Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News