×
Ad

ಪುತ್ತೂರು: ಕಾಂಗ್ರೆಸ್ ಮುಖಂಡ ರಘುನಾಥ ರೈಗೆ ತಂಡದಿಂದ ಹಲ್ಲೆ

Update: 2024-10-20 21:58 IST

ಸಾಂದರ್ಭಿಕ ಚಿತ್ರ

ಪುತ್ತೂರು: ಕಾಂಗ್ರೆಸ್ ಮುಖಂಡನಿಗೆ ಇಬ್ಬರು ಸೇರಿಕೊಂಡು ಹಲ್ಲೆ ನಡೆಸಿದ ಘಟನೆ ಪುತ್ತೂರು ತಾಲೂಕಿನ ಕೆದಂಬಾಡಿ ಗ್ರಾಮದ ತಿಂಗಳಾಡಿ ಎಂಬಲ್ಲಿ ರವಿವಾರ ಸಂಜೆ ನಡೆದಿದೆ.

ತಿಂಗಳಾಡಿ ನಿವಾಸಿ, ಸ್ಥಳೀಯ ಕಾಂಗ್ರೆಸ್ ಮುಖಂಡ ರಘುನಾಥ ರೈ ಹಲ್ಲೆಗೆ ಒಳಗಾದವರು. ಅವರಿಗೆ ಸ್ಥಳೀಯರಾದ ನಿಶಾಂತ್ ಮತ್ತು ವಿಜಿತ್ ಎಂಬವರು ಹಲ್ಲೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ತಿಂಗಳಾಡಿಯ ಅಂಗಡಿಯೊಂದರ ಬಳಿ ರಘುನಾಥ ರೈ ಅವರು ನಿಂತಿದ್ದಾಗ ಅಲ್ಲಿಗೆ ಬಂದ ಆರೋಪಿಗಳು ಮಾತಿಗೆ ಮಾತು ಬೆಳೆಸಿ ಹಲ್ಲೆ ಮಾಡಿದ್ದಾರೆ ಎನ್ನಲಾಗಿದ್ದು, ಹಲ್ಲೆಯ ವೇಳೆಯಲ್ಲಿ ರಘುನಾಥ ರೈ ಅವರ ತಲೆಯನ್ನು ಹಿಡಿದು ಗೋಡೆಗೆ ಜಜ್ಜಲಾಗಿದ್ದು, ಗಂಭೀರ ಗಾಯಗೊಂಡ ರಘುನಾಥ ರೈ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಸಂಪ್ಯ ಪೊಲೀಸರು ಸ್ಥಳಕ್ಕೆ ಧಾವಿಸಿ ಆರೋಪಿಗಳನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಜಾಗದ ತಕರಾರಿಗೆ ಸಂಬಂಧಿಸಿ ಈ ಹಲ್ಲೆ ನಡೆದಿದೆ ಎಂದು ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News